– ಪ್ರಧಾನಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಸೈಡ್‍ಲೈನ್!
ಹುಬ್ಬಳ್ಳಿ: ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿಲ್ಲ ಎನ್ನುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಅಲ್ಲಿಂದ ನಿರ್ಗಮಿಸಿದ ಅವರು, ತಮ್ಮ ಹಿಂದೆ ಕುಳಿತಿದ್ದ ಶಾಸಕ ಅಮೃತ್ ದೇಸಾಯಿ, ಸೇರಿದಂತೆ ಕೆಲವು ನಾಯಕರಿಗೆ ಧನ್ಯವಾದ ತಿಳಿಸಿದರು. ಬಿ.ಎಸ್.ಯಡಿಯೂರಪ್ಪ ಕೈ ಮುಗಿದುಕೊಂಡು ನಿಂತಿದ್ದರೂ ಅದನ್ನು ನೋಡದೇ, ಅಲ್ಲಿಂದ ಸ್ವಲ್ಪ ಮುಂದೆ ಬಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಕೈಮುಗಿದು ನಮಸ್ಕರಿಸಿ ವೇದಿಕೆಯಿಂದ ನಿರ್ಗಮಿಸಿದರು.

ಧಾರವಾಡದಿಂದ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಸಮೀಪ ಕೆಎಲ್‍ಇ ಮೈದಾನದ ಸಮಾವೇಶದಲ್ಲಿ ತಮ್ಮ ಪಕ್ಕದಲ್ಲೇ ಬಿ.ಎಸ್.ಯಡಿಯೂರಪ್ಪ ಕುಳಿತಿದ್ದರೂ ಪ್ರಧಾನಿ ಮೋದಿ ಮಾತನಾಡಲಿಲ್ಲ. ಹಾರ ಹಾಕುವ ವೇಳೆ ಥ್ಯಾಂಕ್ಸ್ ಮಾತ್ರ ಹೇಳಿದರು. ಭಾಷಣದ ವೇಳೆಯೂ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಕಡೆಗಣನೆ ಮಾಡಿದರು.
ಈ ಎಲ್ಲ ಬೆಳವಣಿಗೆಗಳಿಂದ ಬಿ.ಎಸ್.ಯಡಿಯೂರಪ್ಪ ಅವರು ಸೈಡ್‍ಲೈನ್ ಆದರೆ ಎನ್ನುವುದು ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆಡಿಯೋ ಪ್ರಕರಣವನ್ನು ಬಿ.ಎಸ್.ಯಡಿಯೂರಪ್ಪನವರು ಒಪ್ಪಿಕೊಂಡಿದ್ದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದರು. ರಾಜ್ಯದಲ್ಲಿ ಸರ್ಕಾರ ರಚಿಸಲು ವಿಫಲವಾಗಿದ್ದಾರೆ ಎನ್ನುವ ಕಾರಣಕ್ಕೆ ಮೋದಿ ಮುನಿಸಿಕೊಂಡಿದ್ದರು ಎನ್ನುವ ಮಾತುಗಳು ಬಿಜೆಪಿ ನಾಯಕರಿಂದ ಕೇಳಿಬರುತ್ತಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply