ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ

ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ.

ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ ಪರಸ್ಥಿತಿಯನ್ನು ಆಲಿಸಿದ ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಜಿಲ್ಲಾಡಳಿತ ಸಹಾಯದೊಂದಿಗೆ ಕೇವಲ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಕಾರ್ಯದಕ್ಷತೆ ಮೆರೆದಿದ್ದಾರೆ.

ಪಾಸ್ ಪಡೆದ ಮಹಿಳೆ ಹಾಗೂ ಮಕ್ಕಳು ಜಿಲ್ಲಾಡಳಿತಕ್ಕೆ ಧನ್ಯವಾದ ಅರ್ಪಿಸಿ ಭಾರವಾದ ಮನಸ್ಸಿನಿಂದ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಿದರು.

Comments

Leave a Reply

Your email address will not be published. Required fields are marked *