ಸೆಕ್ಸ್ ನಿರಾಕರಿಸಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ

ಕಲಬುರಗಿ: ಸೆಕ್ಸ್ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಸೇಡಂ (Sedam) ತಾಲೂಕಿನ ಬಟಗೇರಾ (Batgera) ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಬೆಟಗೇರ ಗ್ರಾಮದ ನಿವಾಸಿ ನಾಗಮ್ಮ (42). ಪತಿ ಶೇಖಪ್ಪನಿಂದ ಕೊಲೆಯಾಗಿದ್ದಾಳೆ. ಪತ್ನಿಯನ್ನು ಹತ್ಯೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ತೆರಳಿ ತಾನಾಗಿಯೇ ಸರೆಂಡರ್ ಆಗಿದ್ದಾನೆ.ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ: ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

ತನಿಖೆ ನಡೆಸಿದಾಗ, ಶೇಖಪ್ಪ ರಾತ್ರಿಯಿಂದ ಎರಡು ಬಾರಿ  ಸೆಕ್ಸ್‌ಗೆ (Sex) ಒತ್ತಾಯ ಮಾಡಿದ್ದ. ಆದರೆ ಎರಡೂ ಬಾರಿಯೂ ಸೆಕ್ಸ್‌ಗೆ ನಿರಾಕರಿಸಿದ್ದಕ್ಕೆ ನಿನ್ನನ್ನು ಕೊಚ್ಚಿ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದ. ಈ ವೇಳೆ ಕೊಚ್ಚಿ ಹಾಕು ನೋಡೋಣ ಎಂದು ಪತ್ನಿ ಹೇಳಿದ್ದಾಳೆ. ಆಗ ಶೇಖಪ್ಪ ಕೆರಳಿ ಪತ್ನಿಯನ್ನು ಹಗ್ಗದಿಂದ ಉಸಿರುಗಟ್ಟಿಸಿ ನಂತರ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ.

ಭಾನುವಾರ ನಸುಕಿನ ಜಾವದಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಕ್ರಿಮಿನಲ್‍ಗಳ ಮಾಹಿತಿ ನೀಡಲು ನಿರಾಕರಣೆ – ವಾಟ್ಸಾಪ್ ನಿರ್ದೇಶಕರ ವಿರುದ್ಧ ಎಫ್‍ಐಆರ್