ಬೆಳಗಾವಿ | ಹೆಂಡತಿ ಕಾಟಕ್ಕೆ ಬೇಸತ್ತ ಗಂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ (Death Note) ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ನಗರದ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.

ಸುನೀಲ್ ಮೂಲಿಮನಿ (33) ಆತ್ಮಹತ್ಯೆ (Suicide) ಮಾಡಿಕೊಂಡ ಪತಿ. ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 4 ವರ್ಷಗಳ ಹಿಂದೆ ಪೂಜಾ ಎಂಬಾಕೆಯನ್ನ ಸುನೀಲ್ ಮದುವೆಯಾಗಿದ್ದರು. ಈಗ ದಂಪತಿಗೆ ಮೂರು ವರ್ಷದ ಮಗು ಇದೆ. ಇದನ್ನೂ ಓದಿ: ಲಾರಿ, ಬೈಕ್ ನಡುವೆ ಭೀಕರ ಅಪಘಾತ – ಹಾರಿ ಹೋದ ಬೈಕ್ ಸವಾರನ ರುಂಡ

ಆತ್ಮಹತ್ಯೆಗೂ ಮುನ್ನ ʻಮೈ ವೈಫ್ ಈಸ್‌ ರಿಜನ್ ಫಾರ್ ಮೈ ಡೆತ್ʼ ಅಂತ ಡೆತ್‌ನೋಟ್‌ ಬರೆದಿಟ್ಟು ಸುನೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ – ಮೂವರು ಆರೋಪಿಗಳ ಬಂಧನ

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ಶಿಫ್ಟ್‌ ಮಾಡಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ