ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಎಚ್‍ಎಎಲ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಅಂಥೋಣಿ ಆತ್ಮಹತ್ಯೆ ಮಾಡಿಕೊಂಡ ಪತಿ.
ಪತ್ನಿ ಪ್ರಭಾ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಅಂಥೋಣಿ ಕೆಲಸಕ್ಕೆಂದು ಹೊರಗಡೆ ಹೋದಾಗ ಪಕ್ಕದ ಮನೆಯವನ ಜೊತೆ ಸಂಬಂಧ ಬೆಳೆಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾನೆ.

ಒಂದು ದಿನ ಇದ್ದಕ್ಕಿದ್ದಂತೆ ಗಂಡ ಮನೆಗೆ ಬಂದಾಗ ರೆಡ್ ಹ್ಯಾಂಡ್ ಆಗಿ ಪ್ರಭಾ ಸಿಕ್ಕಿಬಿದ್ದಿದ್ದಳು. ಹೀಗೆ ಸಿಕ್ಕಿಬಿದ್ದ ಬಳಿಕ ಪತಿ ಅಂಥೋಣಿ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತ್ರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










Leave a Reply