ಕೊಪ್ಪಳ| ನದಿಯಲ್ಲಿ ಈಜಲು ಹೋಗಿ ಹೈದರಾಬಾದ್‌ನ ವೈದ್ಯೆ ಸಾವು

ಕೊಪ್ಪಳ: ಗಂಗಾವತಿ (Gangavathi) ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ (Doctor) ಓರ್ವರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ನಡೆದಿದೆ.

ಮೃತ ವೈದ್ಯೆಯನ್ನು ಹೈದರಾಬಾದ್‌ನ (Hyderabad) ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಅನನ್ಯ ಸ್ನೇಹಿತರ ಜೊತೆಗೆ ರಜೆ ಕಳೆಯಲು ಸ್ಥಳೀಯ ಪ್ರವಾಸಿ ತಾಣಗಳಾದ ಅಂಜನಾದ್ರಿ, ಪಂಪಾಸರೋವರ, ಸಣಾಪೂರ ಕೆರೆಗೆ ಭೇಟಿ ನೀಡಿ, ತುಂಗಭದ್ರ ನದಿಯ ದಡದಲ್ಲಿಯೇ ಇದ್ದ ರೆಸಾರ್ಟ್ವೊಂದರಲ್ಲಿ ಮಂಗಳವಾರ ರಾತ್ರಿ ಉಳಿದುಕೊಂಡಿದ್ದಾರೆ. ಮುಂಜಾನೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ, ಕಲ್ಲು ಬಂಡೆಯ ಮೇಲಿಂದ ನದಿಗೆ ಜಿಗಿದಿದ್ದಾರೆ. ನದಿಯಲ್ಲಿ ಕಲ್ಲು ಬಂಡೆ ಹಾಗೂ ನದಿಯ ನೀರಿನ ರಭಸಕ್ಕೆ ಅನನ್ಯ ನೀರಿನಲ್ಲಿ ಮುಳುಗಿದ್ದಾರೆ. ಇದನ್ನೂ ಓದಿ: ಹೆತ್ತ ತಾಯಿಯ ಮೇಲೆ ಹಲ್ಲೆ ಆರೋಪ – ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲು

ದಡದಲ್ಲಿಯೇ ಇದ್ದ ಸ್ನೇಹಿತರು ಅನನ್ಯಾ ಅವರನ್ನು ಹುಡುಕಲು ಮುಂದಾಗಿದ್ದಾರೆ. ಕೆಲ ಕಾಲದವರೆಗೆ ಅನನ್ಯ ಮೋಹನ್ ಅವರ ದೇಹ ಕಾಣಿಸಿಕೊಳ್ಳದೆ ಇರುವುದರಿಂದ ಗಾಬರಿಗೊಂಡು ಸ್ಥಳೀಯ ಹಾಗೂ ರೆಸಾರ್ಟ್ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ದೇಹ ಪತ್ತೆಯಾಗಿಲ್ಲ. ಕೂಡಲೇ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೀರಿನಲ್ಲಿ ಅನನ್ಯ ಅವರ ದೇಹದ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 70 ಕೆಜಿ ರಾಡ್‌ ಕುತ್ತಿಗೆಗೆ ಬಿದ್ದು ಚಿನ್ನದ ಪದಕ ವಿಜೇತ ಪವರ್‌ಲಿಫ್ಟರ್‌ ಸಾವು

ಅನನ್ಯ ಮೋಹನ್ ಅವರು ಕಲ್ಲು ಬಂಡೆಯ ಮೇಲಿಂದ ನೀರಿಗೆ ಹಾರುವುದನ್ನು ಸ್ನೇಹಿತರು ವೀಡಿಯೋ ಮಾಡಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ಪೊಲೀಸ್ ಇಲಾಖೆಯವರು ಪ್ರಾಥಮಿಕ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: 7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು