ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ: ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ

ಮಂಗಳೂರು: ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂದು ಮಾಸ್ಕ್ ಮ್ಯಾನ್ (Mask Man) ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.

ಧರ್ಮಸ್ಥಳದಲ್ಲಿ ಉತ್ಖನನ (Dharmasthala Mass Burials Case) ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ (SIT) ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ. ಇದನ್ನೂ ಓದಿ: ಕಲರ್‌ ಕಲರ್‌ ಕಾಗೆ ಹಾರಿಸಿದ್ದ ಸಮೀರ್‌ಗೆ ಈಗ ಬಂಧನ ಭೀತಿ

ಸದ್ಯ ಆರೋಪಿ ಚೆನ್ನನಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, ಬಳಿಕ ಆತನನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: Dharmasthala Case | ಎಸ್‌ಐಟಿಯಿಂದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಅರೆಸ್ಟ್‌

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್ ಮ್ಯಾನ್ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು. ಇದನ್ನೂ ಓದಿ: ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ಸೆರ್ಗಿಯೊ ಗೋರ್ ನೇಮಕ

ಅನಾಮಿಕ ದೂರುದಾರನ ಮುಂದೆ ವೀಡಿಯೋ ಪ್ರದರ್ಶನ ಮಾಡಿ ತನಿಖೆ ಪ್ರಕ್ರಿಯೆಯನ್ನೂ ಮುಂದುವರಿಸಿದ್ದರು. ಇಷ್ಟೆಲ್ಲಾ ತನಿಖೆ ಬಳಿಕ ಮಾಸ್ಕ್ ಮ್ಯಾನ್ ಹೆಣೆದಿದ್ದು ಸುಳ್ಳಿನ ಬಲೆ ಎಂಬುದು ಸಾಬೀತಾಗಿದೆ. ಮುಸುಕುಧಾರಿ ಹೇಳಿದ್ದೆಲ್ಲ ಸುಳ್ಳು ಎಂದು ತಿಳಿಯುತ್ತಿದ್ದಂತೆ ಆತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ