ಸೋನಿಯಾ ಗಾಂಧಿ ಭೇಟಿ ಅಂತ್ಯ- ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಆಹ್ವಾನ?

– ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲ ಅಂದ್ರು ಮಾಜಿ ಸಿಎಂ

ನವದೆಹಲಿ: ತುರ್ತು ಬುಲಾವ್ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಿದ್ದು, ಸದ್ಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಅಂತ್ಯವಾಗಿದೆ.

ದೆಹಲಿಯ ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾದ ಸಿದ್ದರಾಮಯ್ಯಗೆ ಜಮೀರ್ ಅಹ್ಮದ್ ಸಾಥ್ ನೀಡಿದರು. ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿರುವ ಸಿದ್ದರಾಮಯ್ಯ, ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಸೋನಿಯಾ ಅವರು ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ, ಪದಾಧಿಕಾರಿಗಳ ನೇಮಕ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಸೋನಿಯಾ ಗಾಂಧಿ ಕೇಳಿದ್ದಾರೆ. ಎಐಸಿಸಿ ಪುನರ್ ರಚನೆ ಬಗ್ಗೆಯೂ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಾರಿಗೆ ನೌಕರರ ವೇತನ ವಿಳಂಬ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೆಚ್‍ಡಿಕೆ

ಸೋನಿಯಾ ಭೇಟಿಗೂ ಮುನ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ, ಸೋನಿಯಾ ಗಾಂಧಿ ಯಾವ ಕಾರಣಕ್ಕೆ ಕರೆದಿದ್ದಾರೆ ಗೊತ್ತಿಲ್ಲ. ಭೇಟಿ ಮಾಡಿದ ಬಳಿಕ ಗೊತ್ತಾಗುತ್ತೆ. ನಾನು ರಾಷ್ಟ್ರ ರಾಜಕೀಯಕ್ಕೆ ಹೋಗುವುದಿಲ್ಲ. ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಲ್ಲ ಎಂದು ಹೇಳಿದ್ದರು.  ಇದನ್ನೂ ಓದಿ:  ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಸುಸ್ಸಾನೆ ಖಾನ್, ಮಿಕಾ ಸಿಂಗ್!

Comments

Leave a Reply

Your email address will not be published. Required fields are marked *