ನಾನು ಈಗಲೂ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪರ ಇದ್ದೇನೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ನಾನು ಈಗಲೂ ಸಹ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪರವೇ ಇದ್ದೇನೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಾಯಬಾಗ ತಾಲೂಕಿನ ಭಾವನ ಸೌದತ್ತಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‍ರವರ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ತಪ್ಪೊಪ್ಪಿಗೆ ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಲಿಂಗಾಯತ ಧರ್ಮ ಹೋರಾಟವನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ಪ್ರಸ್ತುತ ಪಡಿಸಲು ಆಗದೆ ನಾವು ಎಡವಿದ್ದೇವೆ. ನಾನು ಈಗಲೂ ಬಸವೇಶ್ವರರ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಪರವೇ ಇದ್ದೇನೆ ಎಂದು ಹೇಳಿದ್ದಾರೆ.

ಜನರಿಗೆ ಹಾಗೂ ಪಕ್ಷಕ್ಕೆ ಅನುಕೂಲ ಆಗಲಿ ಎಂದು ಹೋರಾಟಕ್ಕೆ ಕೈ ಹಾಕಿದ್ದೇವು. ಆದರೆ ಈಗ ಅದು ಮುಗಿದು ಹೋದ ಅಧ್ಯಾಯ ಆಗಿದೆ. ಸಮಾಜದ ವಿಷಯದಲ್ಲಿ ಭಿನ್ನಾಭಿಪ್ರಾಯಗಳು ಇದ್ದರೂ, ಪಕ್ಷದ ವಿಷಯಕ್ಕೆ ಬಂದರೆ ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ನಾನು ಖಂಡಿತ ಎಂ.ಬಿ.ಪಾಟೀಲರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *