ಸಿಎಂಗೆ ಕೊರೊನಾ – ಹೋಂ ಐಸೋಲೇಷನ್‍ಗೆ ಒಳಗಾದ ಸಚಿವ ಸುಧಾಕರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಹೋಂ ಐಸೋಲೇಶನ್ ಗೆ ಒಳಗಾಗಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಎರಡು ದಿನಗಳ ಕಾಲ ಸ್ವಯಂಪ್ರೇರಿತನಾಗಿ ಐಸೋಲೇಶನ್ ಗೆ ಒಳಪಡುತ್ತಿದ್ದೇನೆ. ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದು ವರದಿ ಬರುವವರೆಗೆ ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಸಭೆ, ಕಡತ ವಿಲೇವಾರಿ ಕಾರ್ಯಗಳನ್ನು ವರ್ಚ್ಯುಯಲ್ ಮಾಧ್ಯಮಗಳ ಮೂಲಕ ಮುಂದುವರಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಟ್ವೀಟ್ ನಲ್ಲೇನಿದೆ..?
ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಿತನಾದ್ದರಿಂದ ನಾನು ಎರಡು ದಿನಗಳ ಕಾಲ ಸ್ವಯಂ ಪ್ರೇರಿತನಾಗಿ ಐಸೋಲೇಶನ್ ಗೆ ಒಳಪಡುತ್ತಿದ್ದೇನೆ. ಇಂದು ಸಂಜೆ ಮಾಡಿಸಿದ Abott ID NOW ಪರೀಕ್ಷೆಯಲ್ಲಿ ನೆಗಟಿವ್ ಬಂದಿದ್ದು, 2 ದಿನಗಳ ನಂತರ RT-PCR ಪರೀಕ್ಷೆಗೆ ಒಳಪಡಲಿದ್ದೇನೆ. ಇದನ್ನೂ ಓದಿ: BJP ರಾಜ್ಯಾಧ್ಯಕ್ಷ, ರಾಷ್ಟ್ರಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್

ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲದಿದ್ದರೂ, ಇತರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನೈತಿಕ ಜವಾಬ್ದಾರಿ ಹೊತ್ತು ಮುಂದಿನ ಎರಡು ದಿನಗಳ ಕಾಲ ನಾನು ಪ್ರತ್ಯೇಕವಾಗಿರಲಿದ್ದೇನೆ. ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಸಭೆ, ಕಡತ ವಿಲೇವಾರಿ ಕಾರ್ಯಗಳನ್ನು ವರ್ಚುಯಲ್‌ ಮಾಧ್ಯಮಗಳ ಮೂಲಕ ಮುಂದುವರಿಸಲಿದ್ದೇನೆ. ಇದನ್ನೂ ಓದಿ: ಸಿಎಂ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶದ ಸಿಎಂ ಸೇರಿದಂತೆ ಗಣ್ಯರಿಂದ ಶುಭಹಾರೈಕೆ

ಆದ್ದರಿಂದ ಮುಂದಿನ ಎರಡು ದಿನಗಳ ಕಾಲ ನನ್ನನ್ನು ಭೌತಿಕವಾಗಿ ಭೇಟಿ ಮಾಡಲು ಯಾರೂ ಬರಬಾರದೆಂದು ಮನವಿ ಮಾಡುತ್ತೇನೆ. ಎರಡು ದಿನಗಳ ನಂತರ ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ವರದಿ ನೆಗಟಿವ್ ಬಂದಲ್ಲಿ ಬುಧವಾರದಿಂದ ಎಂದಿನಂತೆ ನನ್ನ ಕಾರ್ಯ-ಕಲಾಪಗಳಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *