ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ ಸಿದ್ಧವಾಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನ ನಿರ್ಧರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ (Sonia Gandhi) ಹಾಗೂ ಹೈಕಮಾಂಡ್ ಚುನಾವಣೆಗೂ (Election) ಮುನ್ನ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಿದ್ದರು. ಆದ್ದರಿಂದ ನಾನು ಸಿಎಂ ಆಗಿ ಮುಂದುವರಿಯಬಹುದೆಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ನಮೋ’ಗೆ ಜೈ ಎಂದ ಗುಜರಾತ್ ಜನ – ನೋಟಾ ಮತ ಶೇ.9ರಷ್ಟು ಇಳಿಕೆ

ಜನರು ದಿ. ವೀರಭದ್ರ ಸಿಂಗ್ ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರಿಂದಲೇ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದಿದೆ. ಅಂತಹವರ ಕುಟುಂಬವನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಸಚಿವರೂ ಆದ ದಿ. ವೀರಭದ್ರ ಸಿಂಗ್ ಅವರು ದೀರ್ಘಕಾಲದ ವರೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾಗಿ ಉತ್ತಮ ಆಡಳಿತ ನಡೆಸಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *