ನನಗೆ ಮಾರ್ಕೆಟ್ ಇದೆ, ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಕೇಳಿಬರ್ತಿದೆ : ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿ ಬರ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ, ನನಗೆ ಕಾಂಗ್ರೆಸ್‍ನಲ್ಲಿ ಮಾರ್ಕೆಟ್ ಇದೆ. ಎಲ್ಲರೂ ನನ್ನ ಹೆಸರು ಹೇಳ್ತಾಯಿದ್ದಾರೆ. ನನ್ನ ಹೆಸರು ಕೇಳಿ ಬರಲಿ ಬಿಡಿ ಎಂದು ಸಚಿವ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.

ನಾನು ಆರು ದಿನಗಳ ಹಿಂದೆ ಖಾಸಗಿ ಪ್ರವಾಸದ ಮೇಲೆ ಅಮೆರಿಕಗೆ ಹೋಗಿದ್ದೆ. ಆದರೆ ಬರುವಾಗ ದೆಹಲಿಗೆ ತೆರಳಿ ಇಂಧನ ಸಚಿವರ ಸಮ್ಮೇಳನದಲ್ಲಿ ಭಾಗವಹಿಸಲು ಹೋಗಿದ್ದೆ. ದೆಹಲಿಗೆ ಹೋದ ಮೇಲೆ ಪಕ್ಷದ ಕಚೇರಿಗೆ ತೆರಳಿ ನಾಯಕರನ್ನು ಭೇಟಿಯಾಗಿ ಬಂದಿದ್ದೇನೆ. ಬೇರಾವ ಕಾರಣಕ್ಕೆ ಹೋಗಿರಲಿಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಗೊತ್ತಿಲ್ಲ. ಸ್ವಾಭಾವಿಕವಾಗಿ ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ತೆರಳಿ ವರಿಷ್ಠರು, ರಾಜ್ಯ ಉಸ್ತುವಾರಿ ನಾಯಕರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಉಸ್ತುವಾರಿಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ. ನಾನೆಲ್ಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ನಮ್ಮ ನಾಯಕರು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಯಾವತ್ತು ಆದೇಶ ಹೊರಡಿಸುತ್ತೋ ಅಂದು ಕೆಪಿಸಿಸಿ ಅಧ್ಯಕ್ಷರು ಆಯ್ಕೆ ಆಗ್ತಾರೆ ಎಂದು ಶಿವಕುಮಾರ್ ತಿಳಿಸಿದರು.

 

Comments

Leave a Reply

Your email address will not be published. Required fields are marked *