ಕೋಲಾರ: ಸರ್ಕಾರ ಅಸ್ಥಿರ ಗೊಳಿಸುವಲ್ಲಿ ನನ್ನ ಪಾತ್ರ ಇಲ್ಲ. ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತೆ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಲೂರು ಪಟ್ಟಣದಲ್ಲಿ ಕನಕದಾಸರ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಸರ್ಕಾರ ಅಸ್ಥಿರ ಗೊಳಿಸುವಲ್ಲಿ ನನ್ನ ಪಾತ್ರ ಇಲ್ಲ ಅಂದ್ರು.

ಇದೇ ವೇಳೆ ನನ್ನ ಬೆಂಬಲಿಗ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಂಗ್ರೆಸ್‍ನಿಂದ ಗೆದ್ದಿರುವ ಎಲ್ಲಾ ಶಾಸಕರು ನನ್ನ ಆಪ್ತರು ಅದರಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದರು.
ಬಿಜೆಪಿ ಸಿಎಂ ಕುಮಾರಸ್ವಾಮಿ ದಂಗೆ ವಿಚಾರವಾಗಿ ನೀಡಿದ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರಿಗೆ ದೂರು ನೀಡಿರುವುದು ರಾಜಕೀಯ ಅಷ್ಟೇ, ಅದರಲ್ಲಿ ಬೇರೆ ಉದ್ದೇಶ ಇಲ್ಲ. ಕೇಂದ್ರ ಸರ್ಕಾರವಾಗಲೀ ರಾಜ್ಯ ಸರ್ಕಾರವಾಗಲೀ ಯಾವುದೇ ಸರ್ಕಾರವಿದ್ದರೂ ಜನರಿಂದ ಆಯ್ಕೆಯಾಗಿರುವ ಸರ್ಕಾರಗಳು ಕಾನೂನು ಬಿಟ್ಟು ಏನೂ ಮಾಡಲು ಸಾಧ್ಯವಿಲ್ಲ. 25 ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನ ಖಾಸಗಿ ಹೋಟೆಲ್‍ನಲ್ಲಿ ಕರೆಯಲಾಗಿದೆ. ಇದರಲ್ಲಿ ಯಾವುದೇ ವಿಶೇಷ ಇಲ್ಲ ಎಂದರು.

ಇಂದು ಮಾಲೂರು ಪಟ್ಟಣದಲ್ಲಿ ಕನಕದಾಸರ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಉದ್ಘಾಟನೆ ಮಾಡಿ ನಂತರ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಾಜಿ ಸಿಎಂ ಸಿದ್ದು ಜೊತೆಗೆ ಅರಣ್ಯ ಸಚಿವ ಶಂಕರ್, ಮಾಜಿ ಸಚಿವ ಹೆಚ್ ಎಂ ರೇವಣ್ಣ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆಜಿಎಫ್ ಶಾಸಕಿ ರೂಪಶಶಿಧರ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply