ದರ್ಶನ್‍ಗೆ ಅಪಘಾತವಾದ ಸುದ್ದಿಕೇಳಿ ದಿಗ್ಭ್ರಾಂತನಾದೆ: ನಟ ಜಗ್ಗೇಶ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಪಘಾತವಾಗಿದೆ ಎಂಬ ಸುದ್ದಿ ಕೇಳಿ ನಾನು ದಿಗ್ಭ್ರಾಂತನಾದೆ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, “ಕಲಾಬಂಧು ದರ್ಶನ್‍ಗೆ ಅಪಘಾತವಾದ ಸುದ್ದಿಕೇಳು ದಿಗ್ಭ್ರಾಂತನಾದೆ. ಕೋಟ್ಯಂತರ ಕನ್ನಡದ ಆತ್ಮಗಳು ಹಾಗೂ ಅಮ್ಮನ ಆಶೀರ್ವಾದ ದರ್ಶನ್ ಅವರನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರ ದಯೇ ಯಾರ ಕಣ್ಣು ತಾಕದೆ ಸುಖವಾಗಿ ಬಾಳಿ ಶುಭಹಾರೈಕೆ” ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *