ಪರಶುರಾಮ ಥೀಂ ಪಾರ್ಕ್ ಬಗ್ಗೆ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುತ್ತೇನೆ: ಸುನಿಲ್ ಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡಿದ್ದ ಪರಶುರಾಮ ಥೀಮ್ ಪಾರ್ಕ್ (Parashurama Theme Park) ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಒಪ್ಪಿಸಿದೆ. ಈ ಕುರಿತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಪರಶುರಾಮ ಥೀಂ  ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ. ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜೊತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ

ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ. ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ