ಈಗ ತಕ್ಷಣ ನಾನು ನಿಮಾನ್ಸ್‌ಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ: ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನವರು ಮಾನಸಿಕ ಚಿಕಿತ್ಸೆ ಪಡೆಯಲಿ ಎಂಬ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಕ್ಷಣ ನಿಮಾನ್ಸ್ ಗೆ ಹೋಗುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೌದು ಸಿಟಿ ರವಿಯಿಂದಾಗಿಯೇ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಈಗ ತಕ್ಷಣ ನಾನು ನಿಮಾನ್ಸ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ. ಸಿಟಿ ರವಿ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಅವನ್ಯಾರೋ ಎಂಪಿ ಬಹಳ ಬುದ್ದಿವಂತ, ಅವನಷ್ಟು ನಾವು ಓದಿಲ್ಲ – ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್


ವಿನಯ ಕುಲಕರ್ಣಿ ಅವರನ್ನು ಪೂರ್ಣ ಪ್ರಮಾಣದಲ್ಲಿ ಪಕ್ಷದ ಕೆಲಸಕ್ಕೆ ಬಳಸಿಕೊಳ್ಳುತ್ತೇವೆ. ಅದರಲ್ಲಿ ಅನುಮಾನವೇ ಬೇಡ. ವಿನಯ್ ಕುಲಕರ್ಣಿ ನಮ್ಮ ಹಿರಿಯ ನಾಯಕರು, ಮಂತ್ರಿ ಆಗಿದ್ದವರು ಜಮೀರ್ ಹಾಗೂ ವಿನಯ್ ಕುಲಕರ್ಣಿ ಪರ ನಮ್ಮ ಪಕ್ಷ ಇದೆ. ವಿನಯ್ ಕುಲಕರ್ಣಿ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್ ಮಾಡಿದ್ದಾರೆ. ಬಹಳ ಸಂತೋಷ, ಆದರೆ ಇವರ ಕೇಂದ್ರ ಮಂತ್ರಿಗಳು ಎಲ್ಲ ನಿಯಮ ಪಾಲನೆ ಮಾಡಿದ್ದಾರಾ? ಕೇಂದ್ರ ಸಚಿವರಿಗೆ ಒಂದು ಕಾನೂನು? ಇವರಿಗೊಂದು ಕಾನೂನಾ ಎಂದು ಹರಿಹಾಯ್ದಿದ್ದಾರೆ.  ಇದನ್ನೂ ಓದಿ: ಕೆಜಿಎಫ್‍ನಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡರೂ ಅದು ದೊಡ್ಡದೇ – ವಸಿಷ್ಠ ಸಿಂಹ 

ಒಂದು ಸಮುದಾಯ ಟಾರ್ಗೆಟ್ ಮಾಡಿ ಇಡಿ ದಾಳಿ ಎಂಬ ಜಮೀರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಜಮೀರ್ ಅಹಮದ್ ಈಗಾಗಲೇ ನನ್ನ ತಪ್ಪಿಲ್ಲ ಅಂತ ಹೇಳಿಕೆ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಹೆಚ್ಚು ಕಮೆಂಟ್ ಮಾಡಲು ಹೋಗುವುದಿಲ್ಲ. ಆದರೆ ಇಡೀ ದೇಶದಲ್ಲಿ ಎಲ್ಲ ಕಡೆಯೂ ಹೀಗೆ ಆಗುತ್ತಿದೆ. ಇದರ ವಿರುದ್ಧ ನಾವೂ ಕೂಡ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.

Comments

Leave a Reply

Your email address will not be published. Required fields are marked *