ನಾನು ಸಚಿವ ಸ್ಥಾನದ ಆಕಾಂಕ್ಷಿ: ಶರವಣ

ಬೆಂಗಳೂರು: ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ. ನನಗೂ ವರಿಷ್ಠರು ಸಚಿವ ಸ್ಥಾನ ನೀಡೋ ಭರವಸೆ ಇದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಹೇಳಿದ್ದಾರೆ.

ಪದ್ಮನಾಭನಗರ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯುತ್ತಿದೆ. ಪಕ್ಷಕ್ಕಾಗಿ ನಾನು ದುಡಿದಿದ್ದೇನೆ. ಕುಮಾರಸ್ವಾಮಿ ಸಿಎಂ ಆಗಬೇಕು ಎನ್ನುವ ಅಸೆಯಿತ್ತು. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ. ನನಗೂ ಮಂತ್ರಿಯಾಗಬೇಕು ಎನ್ನುವ ಆಸೆ ಇದೆ. ವರಿಷ್ಠರು ನನಗೂ ಮಂತ್ರಿ ಸ್ಥಾನ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದರು.

ಡಿಸಿಎಂ ಹುದ್ದೆಗೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಹುದ್ದೆ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು. ಸಿಎಂ ಸ್ಥಾನ ನಮಗೆ ಸಿಕ್ಕಿದ್ದರಿಂದ ಡಿಸಿಎಂ ಹುದ್ದೆ ಕಾಂಗ್ರೆಸ್ ವಿವೇಚನೆಗೆ ಬಿಟ್ಟಿದ್ದು. ಅದರಲ್ಲಿ ನಾವು ತಲೆ ಹಾಕುವುದಿಲ್ಲ ಎಂದು ತಿಳಿಸಿದರು.

ಇನ್ನು ಖಾತೆ ಹಂಚಿಕೆ ಇನ್ನು ಚರ್ಚೆ ಆಗಿಲ್ಲ. ಬಹುಮತ ಸಾಭೀತಿನ ನಂತರ ಖಾತೆ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತದೆ. ಬುಧವಾರ ಕುಮಾರಸ್ವಾಮಿ ಸಿಎಂ ಆಗಿ ವಿಧಾನಸೌಧದ ಮುಂದೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಸಿದ್ದತೆ ನಡೆದಿದೆ ಎಂದರು.

ಇದಲ್ಲದೆ ರಾಜ್ಯಾದ್ಯಂತ ಅಪ್ಪಾಜಿ ಕ್ಯಾಂಟೀನ್ ಸ್ಥಾಪನೆ ಕುರಿತು ವರಿಷ್ಠರ ಬಳಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *