ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು.

ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಅನುಜಾ ಪಾಟೀಲ್ 3 ವಿಕೆಟ್, ದೀಪ್ತಿ ಶರ್ಮಾ, ಪೂನಂ ಯಾದವ್, ರಾಧ ಯಾದವ್ ತಲಾ 2 ವಿಕೆಟ್ ಪಡೆದರು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂದಾನ 9 ಬೌಂಡರಿ 3 ಸಿಕ್ಸರ್ ನೆರವಿನಿಂದ 83 ರನ್ ಸಿಡಿಸಿ ಮಿಂಚಿದರು. ಉಳಿದಂತೆ ನಾಯಕಿ ಹರ್ಮನ್ ಪ್ರೀತ್ ಕೌರ್ ತಲಾ 3 ಬೌಂಡರಿ, ಸಿಕ್ಸರ್ ಗಳ ಮೂಲಕ ಕೇವಲ 27 ಎಸೆತಗಳಲ್ಲಿ 43 ರನ್ ಕಲೆಹಾಕಿದ್ರು. ನಿಗದಿತ 20 ಓವರ್ ಗಳಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತ್ತು. ಬಲಿಷ್ಠ ಆಸೀಸ್ ತಂಡವನ್ನ ಮಣಿಸಿದ ಟೀಂ ಇಂಡಿಯಾ ಗ್ರೂಪ್ ಬಿ ಯಲ್ಲಿ ಟಾಪ್ ಸ್ಥಾನ ಪಡೆಯಿತು.

ಪಂದ್ಯದಲ್ಲಿ 82 ರನ್ ಗಳಿಸಿದ ಸ್ಮೃತಿ ಮಂದಾನ ಒಂದು ಸಾವಿರ ರನ್ ಪೂರೈಸಿದರು. ಈ ಮೂಲಕ ಭಾರತದ ಪರ ವೇಗವಾಗಿ ಒಂದು ಸಾವಿರ ರನ್ ಪೂರೈಸಿದ ಆಟಗಾರ್ತಿ ಎಂಬ ಹೆಗ್ಗಳಿಕೆ ಪಡೆದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *