ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

ಬೆಳಗಾವಿ: ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ (Tiffin Box) ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ ಎನ್ನುವ ಮೂಲಕ ಬೆಳಗಾವಿ (Belagavi) ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಮತ್ತು ಅಂಜಲಿ ನಿಂಬಾಳ್ಕರ್‌ಗೆ (Anjali Nimbalkar) ಮಾಜಿ ಶಾಸಕ ಸಂಜಯ್ ಪಾಟೀಲ್  (Sanjay Patil) ಟಾಂಗ್ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚುವವರು ಹಂಚುತ್ತಾರೆ. ನಾನು ಸದ್ಯಕ್ಕೆ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಾನು ಗಂಡಸಾಗಿ ಹೇಗೆ ಹಳದಿ, ಕುಂಕುಮ ಕಾರ್ಯಕ್ರಮ ಮಾಡೋಕೆ ಆಗುತ್ತದೆ? ಕಾರ್ಯಕ್ರಮ ಮಾಡಲು ಎಲ್ಲರಿಗೂ ಸ್ವಾತಂತ್ರ‍್ಯವಿದೆ. ಎಲ್ಲರೂ ಏನು ಬೇಕಾದರೂ ಕಾರ್ಯಕ್ರಮ ಮಾಡಬಹುದು. ಎಲ್ಲರೂ ಅವರವರ ಕಾರ್ಯಕ್ರಮ ಮಾಡುತ್ತಾರೆ. ನಾನು ಪಕ್ಷದ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಬೆಳೆಸಲು ಪಕ್ಷದ ಕಾರ್ಯಕ್ರಮಗಳಲ್ಲಿ ಇರುತ್ತೇನೆ ಎಂದರು.

ಗ್ರಾಮೀಣ ಕ್ಷೇತ್ರದಲ್ಲಿ ಟಿಫಿನ್ ಬಾಕ್ಸ್ ಹಂಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಿಫಿನ್ ಬಾಕ್ಸ್ ತೆಗೆದುಕೊಳ್ಳುವವರು, ತೆಗೆದುಕೊಳ್ಳುತ್ತಿರಬಹುದು. ಆದರೆ ಟಿಫಿನ್ ಬಾಕ್ಸ್ ಬಿಜೆಪಿ ಕಾರ್ಯಕರ್ತರು ಯಾರೂ ತೆಗೆದುಕೊಳ್ಳುವುದಿಲ್ಲ. ಚುನಾವಣೆ ಅಭಿವೃದ್ಧಿ ಮೇಲೆ ಆಗಬೇಕೇ ಹೊರತು. ಏನಾದರೂ ಹಂಚಿ ಆಗಬಾರದು. ಬಾಬಾಸಾಹೇಬ ಅಂಬೇಡ್ಕರ್ ಅವರು ಎಲ್ಲರಿಗೂ ಒಂದೇ ಮತ ಹಾಕುವ ಅಧಿಕಾರ ಕೊಟ್ಟಿದ್ದಾರೆ. ಆ ಮತವನ್ನು ಯಾರೂ ಮಾರಾಟ ಮಾಡಿಕೊಳ್ಳಬಾರದು ಎಂದು ತಿಳಿಸಿದರು. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ

ನಿಮ್ಮ ಪಕ್ಷದವರು ಯಾರೂ ಏನೂ ಹಂಚಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಮ್ಮವರು ಪುಸ್ತಕ ಹಂಚಿದ್ದಾರೆ. ಆದರೆ ಅವರು ಸಾರಾಯಿಯನ್ನು ಹಂಚುತ್ತಿಲ್ಲವಲ್ಲ. ಪುಸ್ತಕ ಹಂಚಬೇಕು, ಬಡವರ ಮಕ್ಕಳಿಗೆ ಕಲಿಸಬೇಕು. ಇದರಿಂದ ಅವರಿಗೆ ಜ್ಞಾನ ಬರುತ್ತದೆ. ಟಿಫಿನ್ ಬಾಕ್ಸ್ ಚುನಾವಣೆ ಸಂದರ್ಭದಲ್ಲಿ ಹಂಚುವುದು, ನಮಗೆ ಮತ ಹಾಕಬೇಕು ಎಂದು ಷರತ್ತು ಹಾಕುವುದು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗುಡಿ ಕಟ್ಟಲು 50 ಲಕ್ಷ ರೂ. ಕೊಡುತ್ತೇನೆ, ಒಂದೂ ಬೇರೆ ಟೇಬಲ್ ಹಾಕಬಾರದು ಎಂದು ಕಂಡಿಷನ್ ಹಾಕುತ್ತಿದ್ದಾರೆ. ನಾನು 10 ವರ್ಷ ಏನೂ ಕೆಲಸ ಮಾಡಿಲ್ಲ. ಇದನ್ನು ಜನರ ಮೇಲೆ ಬಿಡುತ್ತೇನೆ ಎಂದರು.

ನಾನು ನಾಳೆ ಬೆಳಗ್ಗಿನ ವಿಚಾರಕ್ಕೆ ಗ್ಯಾರಂಟಿ ಕೊಡುವುದಿಲ್ಲ. ನಾಳೆ ಬೆಳಗ್ಗೆ ಏಳುತ್ತೇವೋ ಇಲ್ಲವೋ ಗೊತ್ತಿಲ್ಲ. ಅಂತಹ ಆಸೆ ಇರಬಾರದು. ಯಾರು ಅಭಿವೃದ್ಧಿ ಮಾಡುತ್ತಾರೆ, ಅವರು ಏನೂ ಹಂಚುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್ ಕೊಟ್ಟರು. ಇದನ್ನೂ ಓದಿ: ವಿರೋಧಪಕ್ಷ ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ: ಪ್ರಮೋದ್ ಮುತಾಲಿಕ್

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *