ನಾವು ದರ ಏರಿಸುತ್ತೇವೆ – ರಾಜ್ಯ ಸರ್ಕಾರಕ್ಕೆ ಹೋಟೆಲ್‌ ಮಾಲೀಕರ ಸಂಘ ಎಚ್ಚರಿಕೆ

ಬೆಂಗಳೂರು: ವಿದ್ಯುತ್ ದರ ಏರಿಕೆಗೆ (Electricity Tariff Hike) ಬ್ರೇಕ್ ಹಾಕದೇ ಇದ್ದರೆ ಹೋಟೆಲ್ ಆಹಾರಗಳ (Food) ದರ ಏರಿಕೆ ಅನಿವಾರ್ಯ ಎಂದು ಸರ್ಕಾರಕ್ಕೆ ಹೋಟೆಲ್‌ ಮಾಲೀಕರ ಸಂಘ (Hotel Owners Association) ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್‌, ಈಗ ಹಾಲಿನ ದರ (Milk Rate) ಏರಬಹುದು ಎಂಬ ಮುನ್ಸೂಚನೆ ಸಿಕ್ಕಿದೆ. ಇನ್ನೊಂದು ಕಡೆ ರೈಸ್‌ ಮಿಲ್‌ಗಳು ಅಕ್ಕಿ ದರವನ್ನು (Rice Price) ಏರಿಸುವುದಾಗಿ ಹೇಳಿದ್ದಾರೆ. ಹೀಗಾಗಿ ನಾವು ದರ ಏರಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

 

ಈಗಾಗಲೇ ದಿನಸಿ, ತರಕಾರಿಗಳ ದರ ಏರಿಕೆಯಾಗಿದೆ. ವಿದ್ಯುತ್ ದರ ಏರಿಕೆ ಎಲ್ಲರಿಗೂ ದೊಡ್ಡ ಶಾಕ್ ಕೊಟ್ಟಿದೆ. ಇದಕ್ಕೆ ಬ್ರೇಕ್ ಹಾಕದೇ ಇದ್ದರೆ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

ಪ್ರತಿ ಲೀಟರ್‌ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆಯಿದೆ. ಹಾಲಿನ ದರ ಏರಿಕೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಬುಧವಾರ ಹೇಳಿದ್ದರು.