RSS ಇಲ್ಲವೆಂದಿದ್ದರೆ ಭಾರತ, ಪಾಕಿಸ್ತಾನ ಆಗ್ತಿತ್ತು: ಪ್ರಭು ಚವ್ಹಾಣ್

ಬೆಂಗಳೂರು: ಆರ್‌ಎಸ್‌ಎಸ್‌ ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ, ಪಾಕಿಸ್ತಾನ ಆಗುತಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್‌ ವಿರುದ್ಧ ಕುಮಾರಸ್ವಾಮಿ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದನ್ನು ಸಹಿಸಲು ಆಗದೇ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ಎಂದರೆ ದೇಶಭಕ್ತಿ ಸಂಸ್ಥೆ. ದೇಶದ ಪರ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ ಇಲ್ಲವೆಂದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಇದೇ ವೇಳೆ ತಾಲಿಬಾನ್ ಪದ ಬಳಕೆ ಮಾಡಿದ್ದ ಸಿದ್ದರಾಮಯ್ಯ ವಿರುದ್ಧವೂ ಚವ್ಹಾಣ್ ಆಕ್ರೋಶ ಹೊರ ಹಾಕಿದ್ದು, ಪಾಕಿಸ್ತಾನ, ತಾಲಿಬಾನ್ ಎಲ್ಲವೂ ಕಾಂಗ್ರೆಸ್ ಅವರೇ. ನಾವು ದೇಶಭಕ್ತರು. ಪ್ರಧಾನಿ ಮೋದಿ ನಾವೆಲ್ಲ ಒಂದು ಎನ್ನುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ. ಮಾಜಿ ಮುಖ್ಯಮಂತ್ರಿ ಆದವರು ಹೇಗೆ ಮಾತಾಡಬೇಕು ಎಂದು ಅರ್ಥ ಮಾಡಿಕೊಳ್ಳಬೇಕು. ಆರ್‌ಎಸ್‌ಎಸ್‌ ಏನು ಎಂದು ಜನತೆಗೆ ಗೊತ್ತಿದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸುತ್ತೇನೆ. ಆರ್‍ಎಸ್‍ಎಸ್ ಇರೋದಕ್ಕೆ ದೇಶ ಇದೆ. ನಾವು ದೇಶ ಸೇವೆ ಮಾಡುತ್ತಿದ್ದೇವೆ ಎಂದು ಚಾಟಿ ಬೀಸಿದರು. ಇದನ್ನೂ ಓದಿ: ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ

Comments

Leave a Reply

Your email address will not be published. Required fields are marked *