ಸುಳ್ಳು ಭರವಸೆಗಳನ್ನು ಕೇಳಬೇಕಿದ್ದರೆ ಮೋದಿ, ಕೇಜ್ರಿವಾಲ್ ಮಾತು ಕೇಳಿ: ರಾಹುಲ್ ಗಾಂಧಿ

RAHULGANDHI

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಳ್ಳು ಭರವಸೆಗಳನ್ನು ನೀಡುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದರು.

ಪಂಜಾಬ್‍ನ ಪಟಿಯಾಲ ಜಿಲ್ಲೆಯ ರಾಜಪುರದಲ್ಲಿ ನಡೆದ ರ್‍ಯಾಲಿ ವೇಳೆ ಮಾತನಾಡಿದ ಅವರು, ನಾನು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ನೀವು ಸುಳ್ಳು ಭರವಸೆಗಳನ್ನು ನೀಡುವುದನ್ನು ಕೇಳಲು ಬಯಸಿದರೆ, ಮೋದಿ, ಬಾದಲ್ ಮತ್ತು ಕೇಜ್ರಿವಾಲ್ ಅವರನ್ನು ಕೇಳಿ. ನನಗೆ ಸತ್ಯವನ್ನು ಮಾತ್ರ ಹೇಳಲು ಕಲಿಸಲಾಗಿದೆ ಎಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

2014ಕ್ಕೂ ಮುನ್ನ ಪ್ರಧಾನಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಮತ್ತು ಪ್ರತಿ ವರ್ಷ ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಈಗ ಅವರು ಉದ್ಯೋಗ ಅಥವಾ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ. ಈಗ ಬಿಜೆಪಿ ಡ್ರಗ್ಸ್ ಬಗ್ಗೆ ಮಾತ್ರ ಮಾತನಾಡುತ್ತಿದೆ ಎಂದರು. ಇದನ್ನೂ ಓದಿ: ಅಫ್ರಿದಿ ಜೊತೆ ಲೈಂಗಿಕ ಸಂಬಂಧ ಹೊಂದಲು ಬಯಸುತ್ತೇನೆ: ನಟಿ ಮಹಿಕಾ ಶರ್ಮಾ

ನಾನು 2013 ರಲ್ಲಿ ಪಂಜಾಬ್‍ಗೆ ಬಂದೆ ಮತ್ತು ಪಂಜಾಬ್‍ನ ಯುವಕರು ಡ್ರಗ್ಸ್ ಬೆದರಿಕೆಯನ್ನು ಎದುರಿಸುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಅಕಾಲಿದಳ ಪಂಜಾಬ್‍ನಲ್ಲಿ ಡ್ರಗ್ಸ್ ಸಮಸ್ಯೆ ಇಲ್ಲ ಎಂದು ನನ್ನನ್ನು ಲೇವಡಿ ಮಾಡಿದರು. ನಾನು ಕೋವಿಡ್ ಬಗ್ಗೆ ಕೂಡ ಎಚ್ಚರಿಕೆ ನೀಡಿದಾಗ ಅವರು ನನ್ನನ್ನು ಅಪಹಾಸ್ಯ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.

Comments

Leave a Reply

Your email address will not be published. Required fields are marked *