ಮುಂಬೈ: ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಅಥವಾ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ರಾಜ್ಯಾದ್ಯಂತ ಅಪಘಾತಗಳು ಹಾಗೂ ಸಂಚಾರಿ ನಿಯಮ ಉಲ್ಲಂಘನಾ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. 6 ಸಂಚಾರಿ ನಿಯಮಗಳ ಪೈಕಿ, ಯಾವುದೇ ಒಂದನ್ನು ಉಲ್ಲಂಘಿಸುವ ವಾಹನ ಸವಾರರ ಚಾಲನಾ ಪರವಾನಗಿಯನ್ನು ಮೂರು ತಿಂಗಳುಗಳವರೆಗೆ ನಿರ್ಬಂಧಿಸುವ ಅಧಿಕಾರವನ್ನು ಸರ್ಕಾರ ಆರ್‌ಟಿಓಗೆ ನೀಡಿದೆ.

ವೇಗದ ಚಾಲನೆ, ಕುಡಿದು ಚಾಲನೆ, ಸಿಗ್ನಲ್ ಜಂಪ್, ಡ್ರೈವ್ ಮಾಡುವಾಗ ಮೊಬೈಲ್ ಬಳಕೆ, ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಮತ್ತು ಓವರ್ ಲೋಡಿಂಗ್ ಸೇರಿದಂತೆ ಒಟ್ಟು 6 ಕಾರಣಗಳಿಗೆ ಲೈಸನ್ಸ್ ರದ್ದು ಮಾಡಲು ಆರ್‌ಟಿಓ ಅಧಿಕಾರ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಹೆದ್ದಾರಿ ವರಿಷ್ಠಾಧಿಕಾರಿ ವಿಜಯ್ ಪಾಟೀಲ್, ಇಂದಿನ ದಿನಗಳಲ್ಲಿ ಹೆಚ್ಚಿನ ಮೊತ್ತದ ದಂಡ ವಿಧಿಸಿದರೂ, ಸಂಚಾರ ನಿಯಮ ಉಲ್ಲಂಘನೆ ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಚಾಲಕರ ವಾಹನಾ ಚಾಲನಾ ಪರವಾನಗಿಯನ್ನೇ ನಿಷೇಧಿಸಿದರೆ ಎಚ್ಚರಗೊಂಡು ತಕ್ಕ ಪಾಠ ಕಲಿಯುತ್ತಾರೆಂದು ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ 35,800 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿವೆ. ಪರಿಣಾಮವಾಗಿ 12 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ರಸ್ತೆ ಅಪಘಾತ ಮತ್ತು ಸಾವುಗಳನ್ನು 10% ರಷ್ಟು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿತ್ತು. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply