ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

– ಭಾರತ, ಪಾಕ್‌ಗೆ 200% ಸುಂಕ ವಿಧಿಸುವುದಾಗಿ ಎಚ್ಚೆರಿಕೆ ಕೊಟ್ಟಿದ್ದೆ
– ಪಾಕ್‌-ಅಫ್ಘಾನಿಸ್ತಾನ ಯುದ್ಧವನ್ನೂ ಶೀಘ್ರ ನಿಲ್ಲಿಸುತ್ತೇನೆ ಎಂದ ಟ್ರಂಪ್‌

ವಾಷಿಂಗ್ಟನ್‌: ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ (India Pakistan Clashes) ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ರಾತ್ರಿ ಗಾಜಾಕ್ಕೆ (Gaza Strip) ಮಧ್ಯಪ್ರಾಚ್ಯಕ್ಕೆ ತೆರಳುವ ಮುನ್ನ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ. ಭಾರತ-ಪಾಕ್‌ ಸಂಘರ್ಷ ಸೇರಿದಂತೆ ಅನೇಕ ಯುದ್ಧಗಳನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಇಸ್ರೇಲ್‌-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ. ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

ಇನ್ನೂ ಭಾರತ-ಪಾಕ್‌ ಸಂಘರ್ಷ ಉಲ್ಲೇಖಿಸಿ ಮಾತನಾಡಿದ ಟ್ರಂಪ್‌, ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದಂತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ

ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್‌ ಹೇಳಿದ್ದಾರೆ.