ಐಎಂಎ ಕೇಸ್ – ಮೌಲ್ವಿ ಸೇರಿ ಇಬ್ಬರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎರಡನೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಮೌಲ್ವಿ ಅಫ್ಸರ್ ಹನೀಜ್ ಸೇರಿ ಇಬ್ಬರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.

ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್‍ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

ಹನೀಫ್ ಅಫ್ಸರ್ ಅಜೀಜ್ ಶಿವಾಜಿನಗರ ಒಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯ ಧರ್ಮ ಗುರುವಾಗಿದ್ದು, 2017ರಲ್ಲಿ ಹೆಚ್‍ಬಿಆರ್ ಲೇಔಟ್ ನಲ್ಲಿ ಮೂರು ಕೋಟಿ ರೂ. ಮೌಲ್ಯದ ಮನೆ ಉಡುಗೊರೆ ಪಡೆದಿದ್ದ.

ಮಸೀದಿಗೆ ಬರುವ ಸಾವಿರಾರು ಭಕ್ತರ ಭಾವನೆಗಳ ಜೊತೆ ಆಟವಾಡಿದ್ದ ಹನೀಫ್ ಅಫ್ಸರ್ ಜನಸಾಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ನಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸುತ್ತಿದ್ದ. ನಮಾಜ್‍ಗೆ ಬಂದ ಜನರಿಗೆ ಐಎಂಎನಲ್ಲಿ ಹಣ ಹೂಡುವಂತೆ ಪ್ರಚೋದನೆ ಮಾಡುತ್ತಿದ್ದ. ಈ ಧರ್ಮಗುರು ಮಾತನ್ನು ನಂಬಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಹೂಡಿಕೆ ಮಾಡಿಸಿದ್ದರಿಂದ ಧರ್ಮಗುರುವಿನ ಋಣ ತೀರಿಸಲು ಮೂರು ಕೋಟಿ ರೂ. ಮೌಲ್ಯದ ಮನೆಯನ್ನು ಮನ್ಸೂರ್ ಖಾನ್ ನೀಡಿದ್ದ.

Comments

Leave a Reply

Your email address will not be published. Required fields are marked *