ಬೆಂಗಳೂರು: ನಗರದಲ್ಲಿ ಸ್ವಿಗ್ಗಿ ಡೆಲಿವರಿ (Swiggy Delivery) ಬ್ಯಾಗ್‍ಗಳಲ್ಲಿ (Bag) ಗಾಂಜಾ (Cannabis) ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು (Bengaluru) ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ.

ಸ್ವಿಗ್ಗಿ ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟದ ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಾಂಜಾ ಡೆಲಿವರಿ ಬ್ಯಾಗ್‍ನಲ್ಲಿ ಸಾಗಾಟ ಮಾಡಿ ಮಾರಾಟ ಮಾಡುವ ಜಾಲ ಬಯಲಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ ಬೆಂಕಿ ಅವಘಡ – ಮನೆಯಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ

ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ ಹೆಸರಲ್ಲಿ ಗ್ರಾಹಕರಿಗೆ ಗಾಂಜಾ ಸರಬರಾಜು ಮಾಡುತ್ತಿದ್ರು. ಬಿಹಾರದಿಂದ ಬೆಂಗಳೂರಿಗೆ ವಿವಿಧ ಬಗೆಯ ಡ್ರಗ್ಸ್ ತಂದು ಸ್ವಿಗ್ಗಿ ಡೆಲಿವರಿ ಬ್ಯಾಗ್‍ಗಳಲ್ಲಿ ತುಂಬಿಕೊಂಡು ಅಪಾರ್ಟ್ಮೆಂಟ್‌ಗಳಲ್ಲಿ ನಡೆಯುವ ಪಾರ್ಟಿಗಳು, ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು ಎಂಬ ಕುರಿತು ತನಿಖೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ ಗಾಂಜಾ ಮತ್ತು ಎಮ್‍ಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಮತ್ತಷ್ಟು ಇದೇ ರೀತಿಯ ತಂಡಗಳು ಕೆಲಸ ಮಾಡುತ್ತಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ಆಯ್ತು, ಈಗ ಕಂಗನಾ ರಣಾವತ್‌ಗೂ ಕೇಸರಿ ಕಂಟಕ

Leave a Reply