ಐಟಿ ದಾಳಿ ವೇಳೆ ಬೆಳಕಿಗೆ ಬಂತು ಮಹತ್ವದ ವಿಚಾರಗಳು

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟರ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ.

ಗುರುವಾರ ಐಟಿ ಅಧಿಕಾರಿಗಳು ಯಶ್, ಸುದೀಪ್, ಪುನೀತ್, ಶಿವಣ್ಣ ಹಾಗೂ ರಾಧಿಕಾ ಅವರ ಮನೆ ಮೇಲೆ ನಡೆಸಿದ್ದರು. ಈ ವೇಳೆ ಹಲವು ದಾಖಲೆಗಳು ಸಿಕ್ಕಿದ್ದು, ಸ್ಟಾರ್ ನಟರು ಸಾಕಷ್ಟು ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ವ್ಯವಹಾರಗಳ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎರಡನೇ ದಿನವೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಟರು ಬೇನಾಮಿ ಹೆಸರಿನಲ್ಲಿ ಉದ್ಯಮಗಳನ್ನು ನಡೆಸುತ್ತಿದ್ದಾರೆ ಮತ್ತು ಕೋಟ್ಯಂತರ ರೂ. ತೆರಿಗೆಯನ್ನು ವಂಚಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡು ವಿಚಾರಿಸುತ್ತಿದ್ದಾರೆ. ಅಧಿಕಾರಿಗಳು ಬ್ಯಾಂಕ್ ಲಾಕರ್ ಗಳ ಬಗ್ಗೆ ಮಾಹಿತಿ ಕೇಳಿದ್ದು ನಟರು ಈ ವಿವರವನ್ನು ನೀಡಲು ಹಿಂದೇಟು ಹಾಕಿದ್ದಾರೆ.

ಸ್ಟಾರ್ ನಟರಿಗೆ ಧಾರಾವಾಹಿಗಳಿಂದಲೂ ಸಂಕಷ್ಟ ಎದುರಾಗಿದೆ. ಐಟಿ ಅಧಿಕಾರಿಗಳು ತಮ್ಮ ತಮ್ಮ ಪ್ರೊಡಕ್ಷನ್ ಹೌಸ್ ನಲ್ಲಿ ತಯಾರಾಗಿರುವ ಧಾರಾವಾಹಿಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಅಲ್ಲದೇ ಅಧಿಕಾರಿಗಳು ಚಾನೆಲ್ ಗಳಿಗೆ ಮಾರಾಟ ಮಾಡುವ ರಾಯಲ್ಟಿಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ನಟರು ಚಾನೆಲ್ ಗಳಲ್ಲಿ ನಡೆದಿರುವ ಒಪ್ಪಂದ ಪತ್ರ ಕೊಟ್ಟಿದ್ದಾರೆ. ಅದರಿಂದ ಬಂದ ಲಾಭ ನಷ್ಟದ ಬಗ್ಗೆ ಮಾಹಿತಿ ಇಲ್ಲ. ಲಾಭ ನಷ್ಟದ ಮಾಹಿತಿಗಾಗಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಕೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಪುನೀತ್ ಅವರ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಸಿನಿಮಾಗಳು ತಯಾರಾಗಿವೆ. ಈ ಪ್ರೊಡಕ್ಷನ್ ಮಾಲೀಕತ್ವವನ್ನು ಪುನೀತ್ ಅವರ ಪತ್ನಿ ಅಶ್ವಿನಿ ವಹಿಸಿಕೊಂಡಿದ್ದಾರೆ. ಈ ಪ್ರೊಡಕ್ಷನ್‍ನಿಂದ ಕವಲು ದಾರಿ, ಮಾಯಾಬಜಾರು, ಹಂಬಲ್ ಪೊಲಿಟಿಷಿಯನ್ ನೋಗರಾಜ್, ಅಂಜನಿ ಪುತ್ರ, ಒಂದು ಮೊಟ್ಟೆಯ ಕಥೆ ಚಿತ್ರಗಳನ್ನು ನಡೆಸಿದ್ದಾರೆ. ಚಿತ್ರಗಳು ಮಾತ್ರವಲ್ಲದೇ ಧಾರಾವಾಹಿಗಳನ್ನು ಸಹ ನಿರ್ಮಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *