ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿಯೇ ಕಾಂಗ್ರೆಸ್‍ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಇದೀಗ ಕಾಂಗ್ರೆಸ್ ಪಕ್ಷದ ಹಣದ ಪ್ರಭಾವ ಬಿಚ್ಚಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ವೀರಪ್ಪ ಮೊಯ್ಲಿ, `ಕಾಂಟ್ರಾಕ್ಟರ್‍ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಎಂದಿದ್ದಾರೆ. ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಅವರು ಆರೋಪ ಮಾಡಿದ್ದಾರೆ.

ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯದ ನಾಯಕರಿಗೆ ನೇರವಾಗಿ ತಲುಪಿಸುವ ಜೊತೆಗೆ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಮೂಲಕ ಮೊಯ್ಲಿ ಅವರು ಶಾಸಕ ಅಶೋಕ್ ಖೇಣಿ ಅವರ ಕಾಂಗ್ರೆಸ್ ಸೇರ್ಪಡೆಗೆ ಪರೋಕ್ಷವಾಗಿ ಸಿಡಿದೆದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಖೇಣಿ ಹಾಗೂ ಹಾಲಿ ಶಾಸಕರಿಗೆ ಟಿಕೆಟ್ ಕೊಡೋ ವಿಚಾರದಲ್ಲಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಆದ್ರೆ ಇದೀಗ ವೀರಪ್ಪ ಮೊಯ್ಲಿ ನೇರವಾಗಿ ಲೋಕೋಪಯೋಗಿ ಸಚಿವ ಮಹದೇವಪ್ಪ ಅವರನ್ನೇ ಟಾರ್ಗೆಟ್ ಮಾಡಿರುವುದು ತೀವ್ರ ಕುತೂಹಲ ಹುಟ್ಟಿಸಿದೆ.
https://twitter.com/moilyv/status/974322120586158080
https://twitter.com/HarshaMoilyINC/status/974327614306443264

Leave a Reply