ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

-2023-24ರ ಮುಂಗಾರು ಋತುವಿನಲ್ಲಿ 12.49 ಎಲ್‌ಎಂಟಿ ಮಿಲೆಟ್ಸ್ ಖರೀದಿ

ನವದೆಹಲಿ: ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ (Millets) ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ರಾಯಚೂರು | ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣ ಕಳ್ಳತನ

12.49 ಲಕ್ಷ ಮೆಟ್ರಿಕ್ ಟನ್ ಖರೀದಿ:
2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ ಎಂದು ತಿಳಿಸಿದ್ದಾರೆ.

 

ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರ ಕಲ್ಯಾಣ ಯೋಜನೆಗಳ ಫಲಾನುಭವಿಗಳಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮಿಲೆಟ್ಸ್ ಖರೀದಿಯಲ್ಲಿನ ಹೆಚ್ಚಳ ಪ್ರಮುಖವಾಗಿದೆ ಎಂದರು.ಇದನ್ನೂ ಓದಿ: ನಿರಂತರ ಮಳೆಯಿಂದ ಹೆಚ್ಚಿದ ಒಳಹರಿವು – ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿ