ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಶುಭಾರಂಭ ಪಡೆದಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಪಂದ್ಯಗಳ ಪೈಕಿ, ಮೊದಲನೇ ಪಂದ್ಯ ಕೋಲ್ಕತ್ತದ ಈಡನ್‍ಗಾರ್ಡ್ ಮೈದಾನದಲ್ಲಿ ಇಂದು ನಡೆದಿತ್ತು. ಮೊದಲು ಬ್ಯಾಟ್ ಮಾಡಿ ವಿಂಡೀಸ್ 109 ರನ್‍ಗಳಿಸಿತ್ತು. 110 ರನ್ ಗಳ ಸುಲಭ ಸವಾಲನ್ನು ಸ್ವೀಕರಿಸಿದ ಭಾರತ 17.5 ಓವರ್ ಗಳಲ್ಲಿ 110 ರನ್ ಗಳಿಸುವ ಮೂಲಕ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿತು.

ಪ್ರಾರಂಭದಲ್ಲೇ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 6 ರನ್ ಹಾಗೂ ಆರಂಭಿಕ ಆಟಗಾರ ಶಿಖರ್ ಧವನ್ 3 ರನ್ ಗಳಿಸಿ ಔಟಾದರು. ನಂತರ ಬಂದ ಕ್ರುನಾಲ್ ಪಾಂಡ್ಯಾ 21 ರನ್ ಹಾಗೂ  ದಿನೇಶ್ ಕಾರ್ತಿಕ್‍  31 ರನ್ ಗಳು ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು. ವಿಂಡೀಸ್ ಪರ ಫ್ಯಾಬಿಯನ್ ಅಲೆನ್ 27 ರನ್, ಕೀಮೊ ಪೌಲ್ 15 ರನ್ ಹೊಡೆಯುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ್ದರು. ಟೀಂ ಇಂಡಿಯಾದ ಕುಲ್‍ದೀಪ್ ಯಾದವ್ 4 ಓವರ್ ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರೆ, ಉಮೇಶ್ ಯಾದವ್, ಜಸ್ಪ್ರಿತ್ ಬೂಮ್ರಾ, ಕೆ ಖಲೀಲ್ ಅಹಮದ್ ಹಾಗೂ ಕ್ರುನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *