71 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸೀಸ್ ಪಡೆಗೆ ಫಾಲೋಆನ್ ನೀಡುವ ಮೂಲಕ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ. ಅಂತಿಮ ಟೆಸ್ಟ್ ಪಂದ್ಯದ ಐದನೇ ದಿನದಾಟಕ್ಕೆ ಇಂದು ಉಭಯ ತಂಡಗಳು ಕಾಲಿಟ್ಟಿದ್ದವು. ಆದ್ರೆ ಮಂದ ಬೆಳಕು ಮತ್ತು ಮಳೆಯಿಂದಾಗಿ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದೆ.

2-1ರ ಅಂತರದಲ್ಲಿ ಟೀಂ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. 71 ವರ್ಷಗಳ ಬಳಿಕ ಟೀಂ ಇಂಡಿಯಾ ಆಸೀಸ್ ಟೆಸ್ಟ್ ಸರಣಿಯನ್ನು ಗೆದ್ದು ದಾಖಲೆಯನ್ನು ಬರೆದಿದೆ. ಟೀಂ ಇಂಡಿಯಾ ಸರಣಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ವಿರಾಟ್ ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವು ಕಂಡಿದ್ದು, ದೇಶಾದ್ಯಂತ ಜನರು ಕ್ರಿಕೆಟ್ ತಂಡಕ್ಕೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಈ ಹಿಂದೆ ಟೀಂ ಇಂಡಿಯಾ 1988 ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಫಾಲೋಆನ್ ನೀಡಿತ್ತು. ಅಂದು ಕೂಡ ಸಿಡ್ನಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲೇ ನಡೆದಿತ್ತು. ಅದೇ ವರ್ಷ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೂಡ ಫಾಲೋಆನ್ ನೀಡಿತ್ತು, ಇದಾದ ಬಳಿಕ 172 ಟೆಸ್ಟ್ ಪಂದ್ಯಗಳನ್ನು ತವರು ನೆಲದಲ್ಲಿ ಆಡಿರುವ ಆಸೀಸ್ ಒಮ್ಮೆಯೂ ಫಾಲೋಆನ್ ಪಡೆದಿರಲಿಲ್ಲ.

ಟೀಂ ಇಂಡಿಯಾ ಚೈನಾಮನ್ ಖ್ಯಾತಿಯ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಪಂದ್ಯದಲ್ಲಿ 5/99 ವಿಕೆಟ್ ಪಡೆದ ಸಾಧನೆ ಮಾಡಿದ್ದು, ಆಡಿರುವ 6 ಟೆಸ್ಟ್ ಟೂರ್ನಿಯಲ್ಲಿ 2ನೇ ಬಾರಿ ಬಾರಿಗೆ 5 ವಿಕೆಟ್ ಪಡೆದ ಹೆಗ್ಗಳಿಕೆ ಪಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *