ನವದೆಹಲಿ: ಶುಕ್ರವಾರ ಒಂದೇ ದಿನ ದೇಶದಲ್ಲಿ ಅತಿ ಹೆಚ್ಚು 125 ಕೊರೊನಾ ಪಾಸಿಟಿವ್ ದಾಖಲಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 834ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಅತಿ ಹೆಚ್ಚು ಏರಿಕೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 19 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ರೋಗಿಗಳು ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ 39 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸಂಖ್ಯೆ 164ಕ್ಕೆ ಏರಿಕೆಯಾಗಿದೆ. 39ರ ಪೈಕಿ 34 ಪ್ರಕರಣಗಳು ಕಾಸರಗೋಡನಲ್ಲೇ ದಾಖಲಾಗಿದೆ.
ಕಾಸರಗೋಡು ಗಡಿ ಬಂದ್:ಕೊರೋನಾ ವೈರಸ್ ಸೋಂಕಿತರ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಂಪ್ಲೀಟ್ ಲಾಕ್‍ಡೌನ್‍ಗೆ ಪೊಲೀಸ್ ಆಯುಕ್ತ ಐಪಿಎಸ್ ಹರ್ಷ ಆದೇಶಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ, ಶಾಸಕರೂ, ಸಂಸದರೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
https://twitter.com/compolmlr/status/1243567168048029699
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲ್ಫ್ ದೇಶ ಮತ್ತು ದುಬೈನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇಳಿದ ಪರಿಣಾಮ ಕಾಸರಗೋಡಿನಲ್ಲೂ ಸೋಂಕಿತರ ಸಂಖ್ಯೆ ಅತಿವೇಗದಲ್ಲಿ ಏರಿಕೆಯಾಗುತ್ತಿದೆ.

Leave a Reply