ಕೊರೊನಾ ಭೀತಿ – ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟ ನಿರ್ಬಂಧ ಫೆ.28 ರವರೆಗೆ ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಕಳೆದ ಎರಡು ವರ್ಷದಿಂದ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು 2022ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹೊರಡಿಸಿರುವ ಆದೇಶದ ಪ್ರಕಾರ, ಕೊರೊನಾ ಪ್ರಕರಣ ವಿಶ್ವದಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಇಂದು ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

ಕೊರೊನಾ ಮೂರನೇ ಅಲೆ ಭಾರತದಲ್ಲಿ ಈಗಾಗಲೇ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆ ವಿಧಿಸಿದ ನಿರ್ಬಂಧ ವಿಸ್ತರಿಸಲು ನಿರ್ಧರಿಸಿದ್ದು, ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಈ ನಿರ್ಬಂಧವೂ, ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಸೀದಿಯನ್ನು ಒಡೆದು ಹಾಕಿ ಎಂದ ಕಾಳಿ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

ಕಳೆದ ವರ್ಷ ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಡಿಜಿಸಿಎ ಕಳೆದ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಈ ಸಂದರ್ಭ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಇದೀಗ ವಿಶ್ವದ ಹಲವು ದೇಶಗಳು ಮತ್ತೆ ಕೊರೊನಾ ಸೋಂಕಿಗೆ ತತ್ತರಿಸಿದೆ ಹಾಗಾಗಿ ಭಾರತದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಯ ನಿರ್ಬಂಧವನ್ನು ವಿಸ್ತರಿಸಿದೆ.

ಈ ನಡುವೆ ಭಾರತವು ಯುನೈಟೆಡ್ ಸ್ಟೇಟ್ಸ್,  ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್‍ಡಮ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡು ದೇಶಗಳು ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದಾಗಿದೆ. ಇದನ್ನೂ ಓದಿ: UP Election- 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Comments

Leave a Reply

Your email address will not be published. Required fields are marked *