ನಮ್ಮ ಪೈಲಟ್ ಬಿಡುಗಡೆ ಮಾಡಿ – ಪಾಕಿಸ್ತಾನಕ್ಕೆ ಭಾರತ ತಾಕೀತು

ನವದೆಹಲಿ: ಕಸ್ಟಡಿಯಲ್ಲಿರುವ ಭಾರತೀಯ ಪೈಲಟ್ ಅವರನ್ನು ಬಿಡುಗಡೆ ಮಾಡಿ ಭಾರತ ಪಾಕಿಸ್ತಾನಕ್ಕೆ ತಾಕೀತು ಮಾಡಿದೆ.

ವಿದೇಶಾಂಗ ಸಚಿವಾಲಯವು ಭಾರತದಲ್ಲಿವ ಪಾಕ್ ಉಪ ರಾಯಭಾರಿ ಸೈಯದ್ ಹೈದರ್ ಶಾಗೆ ಸಮನ್ಸ್ ಜಾರಿ ಮಾಡಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಅಂತರಾಷ್ಟ್ರೀಯ ಮಾನವೀಯ ಕಾನೂನು ಹಾಗೂ ಜಿನೀವಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಪಾಕ್ ಭಾರತೀಯ ಸೇನೆಗೆ ಸೇರಿರುವ ಪೈಲೆಟ್ ಅವರನ್ನು ಸೆರೆಹಿಡಿದಿಟ್ಟುಕೊಂಡು ಚಿತ್ರಹಿಂಸೆ ನೀಡಿ, ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಕ್ರೌರ್ಯ ಮೆರೆಯುತ್ತಿದೆ. ಇದು ಅಪರಾಧ. ಈ ಕೂಡಲೇ ಭಾರತೀಯ ಪೈಲೆಟ್ ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.

ಏನಿದು ಜಿನೀವಾ ಒಪ್ಪಂದ?
ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ಒಪ್ಪಂದ ಇದಾಗಿದ್ದು, ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *