ಭಾರತದಲ್ಲಿ 1,17,100 ಹೊಸ ಕೊರೊನಾ ಪ್ರಕರಣ- 302 ಮಂದಿ ಸಾವು

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಇದೀಗ 1,17,100 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕಳೆದ 24 ಗಂಟೆಯಲ್ಲಿ 1,17,100 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ರೇಟ್ ಶೇ.7.74 ಇದೆ. ಕಳೆದ 24 ಗಂಟೆಯಲ್ಲಿ 302 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 4,83,178ಕ್ಕೇರಿದೆ. ಸುಮಾರು 30,836 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೂ ಒಟ್ಟು 3,43,71,845 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ 3,71,363 ಸಕ್ರಿಯ ಪ್ರಕರಣಗಳಿದ್ದು, 149.66 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಇನ್ನು 27 ರಾಜ್ಯಗಳಲ್ಲಿ ಸುಮಾರು 3,007 ಓಮಿಕ್ರಾನ್ ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ 1,199 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಇಂದು ರಾತ್ರಿ 8 ಗಂಟೆಯಿಂದ್ಲೇ ಸಿಗಲ್ಲ ಮದ್ಯ – ಎಣ್ಣೆ ಪಾರ್ಸೆಲ್‍ಗೂ ನೋ ಪರ್ಮಿಷನ್

CORONA-VIRUS.

ಮಹಾರಾಷ್ಟ್ರದಲ್ಲಿ 876, ದೆಹಲಿಯಲ್ಲಿ 465, ಕರ್ನಾಟಕದಲ್ಲಿ 333 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಹಿಂದೆ ಐದನೇ ಸ್ಥಾನದಲ್ಲಿತ್ತು, ಅದಕ್ಕೂ ಮುನ್ನ ಎಂಟನೇ ಸ್ಥಾನದಲ್ಲಿತ್ತು. ಪ್ರತಿ ನಿತ್ಯ ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ನಿನ್ನೆ ಬೆಂಗಳೂರಿನಲ್ಲಿ ಒಂದು ಲಕ್ಷ ಸನಿಹಕ್ಕೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರಿನಲ್ಲಿ 86,710 ಮಂದಿಗೆ ಟೆಸ್ಟ್ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ 70 ಸಾವಿರಕ್ಕೂ ಹೆಚ್ಚು ಟೆಸ್ಟ್ ಮಾಡಲಾಗ್ತಿದೆ.

Comments

Leave a Reply

Your email address will not be published. Required fields are marked *