ಬೀದಿ ಬೀದಿ ಸುತ್ತಾಡಬೇಡಿ ಕೊಹ್ಲಿ, ರೋಹಿತ್ ವಿರುದ್ಧ ಬಿಸಿಸಿಐ ಗರಂ

ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿರುದ್ಧ ಬಿಸಿಸಿಐ ಗರಂ ಆಗಿದೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಲು ಪ್ರಯಾಣ ಬೆಳೆಸಿರುವ ಟೀಂ ಇಂಡಿಯಾಗೆ ಕೊರೊನಾ ಆತಂಕ ಎದುರಾಗಿದೆ. ಅಶ್ವಿನ್‍ಗೆ ಕೊರೊನಾ ಪಾಸಿಟಿವ್ ವರದಿಯಾದರೆ, ಕೊಹ್ಲಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿಯಾಗಿತ್ತು. ಈ ನಡುವೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಂಗ್ಲೆಂಡ್‍ನಲ್ಲಿ ಸುತ್ತಾಡುತ್ತಿದ್ದರೆ ಜೊತೆಗೆ ಸಾರ್ವಜನಿಕರೊಂದಿಗೆ ನಿಂತು ಫೋಟೋಗೆ ಫೋಸ್ ನೀಡಿದ್ದರು. ಆ ಬಳಿಕ ಎಚ್ಚೆತ್ತುಕೊಂಡಿರುವ ಬಿಸಿಸಿಐ ಬಯೋ ಬಬಲ್ ಇಲ್ಲವೆಂದು ಬೇಕಾಬಿಟ್ಟಿ ತಿರುಗಾಡಬೇಡಿ ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದು ಕರೆಮಾಡಿ ವಾರ್ನಿಂಗ್ ನೀಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್?

ಇಂಗ್ಲೆಂಡ್‍ನಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ. ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಏಕೈಕ ಟೆಸ್ಟ್ ಪಂದ್ಯ ಜುಲೈ 1 ರಿಂದ ಆರಂಭವಾಗುತ್ತಿದೆ. ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.

Live Tv

Comments

Leave a Reply

Your email address will not be published. Required fields are marked *