ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್(81) ಅವರು ಇಂದು ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಜನಿಸಿರುವ ಇವರು ಕರ್ನಾಟಕದ ಶಿರಸಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ನಂತರ ಇಂಗ್ಲೆಂಡ್‍ನಲ್ಲಿ ರಾಜ್ಯಶಾಸ್ತ್ರ, ತತ್ವಶಾಸ್ತ್ರ ಮತ್ತು ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದಾರೆ.

ನಾಟಕಕಾರ, ಚಿತ್ರ ನಿರ್ದೇಶಕ, ನಟ ಹಾಗೂ ಕವಿಯಾಗಿಯೂ ಖ್ಯಾತಿ ಪಡೆದಿದ್ದಾರೆ. ಇವರ ತುಘಲಕ್ ಮತ್ತು ತಲೆದಂಡ ನವ್ಯಸಾಹಿತ್ಯ ಚಳವಳಿಯ ಅತ್ಯುತ್ತಮ ನಾಟಕಗಳು ತಬ್ಬಲಿಯು ನೀನಾದೆ ಮಗನೆ, ಒಂದಾನೊಂದು ಕಾಲದಲ್ಲಿ, ಕಾಡು, ಸಂಸ್ಕಾರ, ವಂಶವೃಕ್ಷ ಮೊದಲಾದ ಕೆಲ ಕನ್ನಡ ಚಿತ್ರಗಳು ನಿರ್ದೇಶನ ಮಾಡಿದ್ದಾರೆ. ಕಾರ್ನಾಡರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ 1998 ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಕ್ನನಡಕ್ಕೆ 6ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಇವರದ್ದಾಗಿದೆ.

Comments

Leave a Reply

Your email address will not be published. Required fields are marked *