ಪಿಒಕೆ ಮೇಲೆ ಫಿರಂಗಿ ದಾಳಿ – 4 ಉಗ್ರರ ಅಡಗುದಾಣಗಳು ಉಡೀಸ್

ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದ ನೀಲಂ ಕಣಿವೆಯಲ್ಲಿ ನಾಲ್ಕು ಭಯೋತ್ಪಾದಕರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಸಾವು-ನೋವು ಹಾಗೂ ಅಪಾರ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

ಪಿಒಕೆಯ ಒಳಗೆ ತಂಗ್ಧರ್ ಸೆಕ್ಟರ್ ಎದುರಿನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರತದೊಳಗೆ ನುಸುಳಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಶಿಬಿರಗಳ ಮೇಲೆ ದಾಳಿ ನಡೆಸಲಾಗಿದೆ. ಭಾರತೀಯ ಸೇನೆ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ಫಿರಂಗಿ ಬಳಸಿ ದಾಳಿ ನಡೆಸಿದೆ. ಸೇನೆ ನಡೆಸಿದ ದಾಳಿಯಿಂದಾಗಿ ಪಿಒಕೆಯಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಸೇನೆಯು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿದೆ ಎಂದು ತಿಳಿದು ಬಂದಿದೆ.

ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಸೆಕ್ಟರ್‍ನಲ್ಲಿ ಭಾನುವಾರ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘಿಸಿತ್ತು. ಇದರಿಂದಾಗಿ ಇಬ್ಬರು ಭಾರತೀಯ ಸೈನಿಕರು ಹಾಗೂ ಓರ್ವ ನಾಗರಿಕ ಸಾವನ್ನಪ್ಪಿದ್ದರು. ಈ ಘಟನೆ ನಂತರ ಭಾರತೀಯ ಸೇನೆ ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ನಡೆಸಿದೆ.

ಒಂದು ಮನೆ ಹಾಗೂ ಅಕ್ಕಿ ಗೋಡೌನ್ ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಎರಡು ಕಾರು, 19 ಹಸು ಹಾಗೂ ಕುರಿಗಳನ್ನು ಹೊಂದಿರುವ ಎರಡು ಹಸು ಶೆಲ್ಟರ್ ಗಳನ್ನು ನಾಶಪಡಿಸಲಾಗಿದೆ.

ಪಾಕಿಸ್ತಾನದ ಗುಂಡಿನ ದಾಳಿ ಸಂದರ್ಭದಲ್ಲಿ ಆರು ಮನೆಗಳು, ನಾಶವಾಗಿದ್ದು, ಚಿತ್ರಕೂಟ್ ಗ್ರಾಮದಲ್ಲಿ ಗರಿಷ್ಠ ಹಾನಿ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದದ್ದಾರೆ.

ಭಾರತೀಯ ಸೇನೆಯ ಮಾಹಿತಿ ಪ್ರಕಾರ, ತಂಗ್ಧರ್ ಸೆಕ್ಟರ್(ಜಮ್ಮು ಕಾಶ್ಮೀರ)ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದಕ್ಕಾಗಿ ಇಬ್ಬರು ಭಾರತೀಯ ಸೈನಿಕರು ಮತ್ತು ಓರ್ವ ನಾಗರಿಕರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಪಾಕಿಸ್ತಾನಕ್ಕೆ ಭಾರೀ ಹಾನಿ ಸಂಭವಿಸಿದೆ ಎಂದು ತಿಳಿಸಿದೆ.

Comments

Leave a Reply

Your email address will not be published. Required fields are marked *