ಹ್ಯಾಮಿಲ್ಟನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಗಳ ಸನಿಹದಲ್ಲಿದ್ದು, ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಲ್ಲಿ 56 (45+11) ರನ್ ಗಳಿಸಿದ್ದು, 3ನೇ ಟಿ20 ಪಂದ್ಯದಲ್ಲಿ 25 ರನ್ ಗಳಿಸಿದರೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಮುರಿಯಲಿದ್ದಾರೆ.
ಅಂತರ್ ರಾಷ್ಟ್ರೀಯ ಕ್ರಿಕೆಟ್ ಟಿ20 ಮಾದರಿಯಲ್ಲಿ ಧೋನಿ 1,112 ರನ್ ಗಳಿಸಿದ್ದು, ಈ ದಾಖಲೆ ಬ್ರೇಕ್ ಮಾಡಲು ಕೊಹ್ಲಿಗೆ ಕೇವಲ 25 ರನ್ ಗಳ ಅಗತ್ಯವಿದೆ. ಭಾರತದ ಪರ ನಾಯಕನಾಗಿ ಅತಿಹೆಚ್ಚು ಟಿ20 ಮಾದರಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ದಾಖಲೆ ಧೋನಿ ಹೆಸರಿನಲ್ಲಿದೆ. ನಾಳೆಯ ಪಂದ್ಯದಲ್ಲಿ ಈ ದಾಖಲೆ ಮುರಿಯುವ ಸಾಧ್ಯತೆ ಇದೆ. ವಿಶ್ವ ಕ್ರಿಕೆಟ್‍ನಲ್ಲಿ ಟಿ20 ಮಾದರಿಯಲ್ಲಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಡುಪ್ಲೆಸಿಸ್ 1,273 ರನ್‍ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಕೇನ್ ವಿಲಿಯಮ್ಸ್ 1,148 ರನ್ ಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಅಂತರ್ ರಾಷ್ಟ್ರೀಯ ಟಿ20 ಮಾದರಿಯಲ್ಲಿ ಅತಿ ಹೆಚ್ಚು 50ಪ್ಲಸ್ ರನ್ ಗಳಿಸಿದ ಆಟಗಾರ ಪಟ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ, ಡುಪ್ಲೆಸಿಸ್‍ರೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ನಾಳಿನ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ಅರ್ಧ ಶತಕ ಗಳಿಸಿದರೆ ಕೇನ್ ವಿಲಿಯಮ್ಸನ್ ರೊಂದಿಗೆ ಮೊದಲ ಸ್ಥಾನ ಪಡೆಯುತ್ತಾರೆ. ಇದುವರೆಗೂ ಕೇನ್ ವಿಲಿಯಮ್ಸನ್ 8 ಬಾರಿ 50 ಪ್ಲಸ್ ರನ್ ಗಳಿಸಿದ್ದಾರೆ.
ಇತ್ತ ಅಂತರ್ ರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್‍ನಲ್ಲಿ 50 ಸಿಕ್ಸರ್ ಸಿಡಿಸಿದ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕೊಹ್ಲಿಗೆ 7 ಸಿಕ್ಸರ್ ಗಳ ಅಗತ್ಯವಿದೆ. ಇದುವರೆಗೂ ಈ ಸಾಧನೆಯನ್ನು ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಮಾತ್ರ ಮಾಡಿದ್ದಾರೆ. ಕೊಹ್ಲಿ 7 ಸಿಕ್ಸರ್ ಹೊಡೆದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆಯುತ್ತಾರೆ.
What’s with #TeamIndia‘s new training drill????? #NZvIND pic.twitter.com/HXuGXQjg4O
— BCCI (@BCCI) January 28, 2020

Leave a Reply