ಪ್ರತಿಭಟನೆಗಿಳಿದ ಉಕ್ರೇನ್‌ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳು

ನವದೆಹಲಿ: ರಷ್ಯಾ ಆಕ್ರಮಣದ ಮಧ್ಯೆ ಶಿಕ್ಷಣವನ್ನು ನಿಲ್ಲಿಸಿ, ಉಕ್ರೇನ್‌ನಿಂದ ಭಾರತಕ್ಕೆ ವಾಪಸಾದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಉಕ್ರೇನ್‌ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು ಭಾನುವಾರ ತಮ್ಮ ಪೋಷಕರೊಂದಿಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಸಹಾಯ ಮಾಡಲು ಕೋರಿದ್ದಾರೆ. ಇದನ್ನೂ ಓದಿ: ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ

ದೇಶದ 18 ರಾಜ್ಯಗಳಿಂದ ಸುಮಾರು 500 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಜಮಾಯಿಸಿ, ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯುನಿವರ್ಸಿಟಿಯ ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಅರ್ಜುನ್ ಬಟಿಶ್ ತಂದೆ ಹರೀಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ವಾರ ಉಕ್ರೇನ್‌ನಲ್ಲಿ ಅಧ್ಯಯನವನ್ನು ನಿಲ್ಲಿಸಿ ದೇಶಕ್ಕೆ ಮರಳಿದ ವಿದ್ಯಾರ್ಥಿಗಳ ಪೋಷಕರ ಗುಂಪೊಂದು ತಮ್ಮ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

ರಾಷ್ಟ್ರೀಯ ವೈದ್ಯಕೀಯ ಆಯೋಗ ಮಾರ್ಚ್ 4 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸನ್ನಿವೇಶಗಳಿಂದ ಇಂಟರ್ನ್ಶಿಪ್ ಬಾಕಿ ಉಳಿದಿರುವ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಉಳಿದ ಭಾಗವನ್ನು ಭಾರತದಲ್ಲಿ ಪೂರ್ಣಗೊಳಿಸಲು ಅರ್ಹರಾಗಿದ್ದಾರೆ. ಆದರೆ ಯಾವುದೇ ನಿರ್ದೇಶನಗಳನ್ನು ನೀಡಲಾಗುವುದಿಲ್ಲ ಎಂದಿತ್ತು.

Comments

Leave a Reply

Your email address will not be published. Required fields are marked *