ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಅವಮಾನ

ಅಂದುಕೊಂಡಂತೆ ಆಗಿದ್ದರೆ ನಿನ್ನೆ ಇಂಗ್ಲೆಂಡಿನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಭಾಷಣ ಮಾಡಬೇಕಿತ್ತು. ಅದಕ್ಕಾಗಿ ವಿಶ್ವವಿದ್ಯಾಲಯವು ಅವರನ್ನು ಆಹ್ವಾನಿಸಿತ್ತು. ಕೊನೆ ಕ್ಷಣದಲ್ಲಿ ಅಗ್ನಿಹೋತ್ರಿ ಭಾಷಣವನ್ನು ರದ್ದು ಮಾಡುವ ಮೂಲಕ ಅವಮಾನಿಸಲಾಗಿದೆ ಎಂದು ಸ್ವತಃ ವಿವೇಕ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ವಿವೇಕ್ ಅಗ್ನಿಹೋತ್ರಿ, ‘ಹಿಂದೂ ಧ್ವನಿಯನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಹತ್ತಿಕ್ಕುವಂತಹ ಕೆಲಸವಾಗಿದೆ. ಅವರು ಕೊನೆ ಕ್ಷಣದಲ್ಲಿ ನನ್ನ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಮೂಲಕ ಅವರು ಅಲ್ಪಸಂಖ್ಯಾತರಾಗಿರುವ ಹಿಂದೂ ಜನಾಂಗೀಯ ಹತ್ಯೆ ಮತ್ತು ಹಿಂದೂ ವಿದ್ಯಾರ್ಥಿಗಳ ಹಕ್ಕುಗಳನ್ನು ಮೊಟಕುಗೊಳಿಸಿದ್ದಾರೆ. ನನ್ನ ಭಾಷಣ ರದ್ದಾಗುವುದಕ್ಕೆ ಕಾರಣ, ಅಲ್ಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದವರು ಪಾಕಿಸ್ತಾನಿ ಮೂಲದವರು. ಈ ಕಷ್ಟದ ಹೋರಾಟದಲ್ಲಿ ನೀವು ನನ್ನನ್ನು ಬೆಂಬಲಿಸಿ’ ಎಂದು ಬರೆದುಕೊಂಡಿದ್ದಾರೆ ಮತ್ತು ವಿಡಿಯೋ ಸಂದೇಶ ರವಾನಿಸಿದ್ದಾರೆ. ಅಲ್ಲದೇ ವಿಶ್ವ ವಿದ್ಯಾಲಯದ ವಿರುದ್ಧ ಕಾನೂನು ಮೊಕದ್ದಮೆ ಹೂಡವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ : ನಟ ಚೇತನ್ ಇಂದು ಕೋರ್ಟಿಗೆ ಹಾಜರ್

ನನ್ನ ನಿಲುವನ್ನು ಮಾತಿನ ಮೂಲಕ ಹೇಳುವುದಕ್ಕಾಗಿ ಕಾತುರತೆಯಿಂದ ಕಾಯುತ್ತಿದ್ದೆ. ಆದರೆ, ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಹಿಂದೂಗಳು ಅಲ್ಪಸಂಖ್ಯಾತರು. ನನ್ನಿಂದಾಗಿ ಅವರ ಧ್ವನಿ ದೊಡ್ಡದಾಗುತ್ತದೆ ಎನ್ನುವ ಭಯವೂ ಅದರಲ್ಲಿ ಇರಬೇಕು ಎಂದೂ ಅಗ್ನಿಹೋತ್ರಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿಣಾವ ಎಂದೂ ಅವರು ಆರೋಪಿಸಿದ್ದಾರೆ.

Comments

Leave a Reply

Your email address will not be published. Required fields are marked *