ಅಮಿತ್ ಶಾ ಕಾಶ್ಮೀರ ಭೇಟಿ – ಕೆಲ ಪ್ರದೇಶಗಳಲ್ಲಿ ಇಂಟರ್‌ನೆಟ್‌ ಸ್ಥಗಿತ, ದ್ವಿಚಕ್ರ ವಾಹನ ವಶ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಕಣಿವೆ ರಾಜ್ಯಕ್ಕೆ ಭೇಟಿ ನೀಡಲಿರುವ ಬೆನ್ನಲ್ಲೇ ಪೊಲೀಸರು ಕಾಶ್ಮೀರದ ಕೆಲವು ಪ್ರದೇಶಗಳ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಿ ಕೆಲ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಟೋಬರ್ 23 ರಂದು ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅದಲ್ಲದೆ ಅಮಿತ್ ಶಾ ಶ್ರೀನಗರದಿಂದ ಶಾರ್ಜಾಗೆ ಹಾರಾಟ ನಡೆಸಲಿರುವ ಮೊದಲ ವಿಮಾನಕ್ಕೆ ಚಾಲನೆ ನೀಡಲಿದ್ದಾರೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ಇಂದು ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

ಈ ನಡುವೆ ನಿನ್ನೆ ದ್ವಿಚಕ್ರ ವಾಹನಗಳ ವಶ ಪಡೆದ ಬಗ್ಗೆ ಮತ್ತು ಇಂಟರ್‌ನೆಟ್‌ ಸ್ಥಗಿತಗೊಳಿಸಿರುವ ಕುರಿತು ಟ್ವಿಟ್ಟರ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್, ಇಂಟರ್‌ನೆಟ್‌ ಸ್ಥಗಿತಗೊಳಿಸಿರುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವುದಕ್ಕೂ ಅಮಿತ್ ಶಾ ಭೇಟಿಗೂ ಯಾವುದೇ ಸಂಬಂಧವಿಲ್ಲ. ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿ ಈ ಕ್ರಮ ಕೈಗೊಂಡಿದ್ದೇವೆ. ಕೆಲದಿನಗಳ ಹಿಂದೆ ಹಿಂಸಾತ್ಮಕ ಘಟನೆಗಳು ನಡೆದಿತ್ತು ಆ ಬಳಿಕ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.

ಕೆಲದಿನಗಳ ಹಿಂದೆ ಉಗ್ರರು ಹಲವು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿ ಕೌರ್ಯ ಮೆರೆದಿದ್ದರು. ಈ ಸಂದರ್ಭ ಕೂಡ ಹಲವು ಪ್ರದೇಶಗಳ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳ ದಾಖಲೆಗಳ ತಪಾಸಣೆ ನಡೆಸಿ ಬಿಡುವಂತಹ ಕ್ರಮಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – 88ಕ್ಕೆ ಏರಿದ ಸಾವಿನ ಪ್ರಮಾಣ

Comments

Leave a Reply

Your email address will not be published. Required fields are marked *