ಡೆಲ್ಲಿ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್‍ಗೆ ಪದಾರ್ಪಣೆ?

ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಡೆಲ್ಲಿ ಮತ್ತು ಮುಂಬೈ ನಡುವಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್‍ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ.

IPL 2022 MI VS KKR 02

ಈಗಾಗಲೇ 15ನೇ ಆವೃತ್ತಿ ಐಪಿಎಲ್‍ನಲ್ಲಿ ಮುಂಬೈ ತಂಡ ಹೀನಾಯ ಪ್ರದರ್ಶನ ನೀಡಿ ಪ್ಲೇ ಆಫ್ ರೇಸ್‍ನಿಂದ ಹೊರನಡೆದಿದೆ. ಇಂದು ಡೆಲ್ಲಿ ವಿರುದ್ಧ ಕೊನೆಯ ಲೀಗ್ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಅವಕಾಶ ಕೊಡಿ ಎಂಬ ಅಭಿಪ್ರಾಯ ಅಭಿಮಾನಿಗಳಿಂದ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಧೋನಿಗೆ ಚೆನ್ನೈ ಪರ ಕೊನೆಯ ಪಂದ್ಯ? – #DefinitelyNot ಟ್ರೆಂಡಿಂಗ್

ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯ ಮುಂಬೈಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಾದರೆ, ಡೆಲ್ಲಿಗೆ ಪ್ಲೇ ಆಫ್‍ಗೇರಲು ಕಡೆಯ ಅವಕಾಶವಾಗಿದೆ. ಈ ಪಂದ್ಯದಲ್ಲಿ ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‍ಗೆ ಎಂಟ್ರಿ ಕೊಡಲಿದೆ. ಡೆಲ್ಲಿ ಗೆದ್ದರೆ, ಆರ್‌ಸಿಬಿ ಅದೃಷ್ಟದಾಟದಲ್ಲಿ ಸೋತು ಮನೆ ದಾರಿ ಹಿಡಿಯಬೇಕಾಗಿದೆ. ಹಾಗಾಗಿ ಇಂದಿನ ಪಂದ್ಯ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಚೆನ್ನೈಗೆ ಸಿಂಹಸ್ವಪ್ನವಾದ ಅಶ್ವಿನ್ – ಸೋಲಿನೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದ ಹಾಲಿ ಚಾಂಪಿಯನ್

ಮುಂಬೈಗೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಗೆ ವಿದಾಯ ಹೇಳುವ ಅವಕಾಶವಿದೆ. ಜೊತೆಗೆ ಹಲವು ಯುವ ಪ್ರತಿಭೆಗಳಿಗೆ ಅವಕಾಶ ನೀಡಿ ಮುಂದಿನ ಐಪಿಎಲ್ ವೇಳೆ ತಂಡವನ್ನು ಬಲಿಷ್ಠವಾಗಿಸುವ ವೇದಿಕೆಯಾಗಿ ಬಳಸಿಕೊಳ್ಳವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬದಲಾವಣೆಯ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಅಲ್ಲದೇ ಯುವ ಆಟಗಾರ ಅರ್ಜುನ್ ತೆಂಡೂಲ್ಕರ್‌ಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ 30 ಲಕ್ಷ ರೂ. ನೀಡಿ ಖರೀದಿಸಿತು. ಆದರೆ ಈವರೆಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಿಲ್ಲ. ಹಾಗಾಗಿ ಇಂದಿನ ಕೊನೆಯ ಲೀಗ್ ಪಂದ್ಯದಲ್ಲಿ ಅವಕಾಶ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಆದರೆ ಮುಂಬೈ ತಂಡ ಅವಕಾಶ ನೀಡುತ್ತಾ? ಅಥವಾ ಮತ್ತೆ ಅರ್ಜುನ್ ತೆಂಡೂಲ್ಕರ್‌ಗೆ ನಿರಾಸೆ ಮಾಡುತ್ತಾ? ಎಂಬುದನ್ನು ಕಾದುನೋಡಬೇಕಾಗಿದೆ.

Comments

Leave a Reply

Your email address will not be published. Required fields are marked *