ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

ಲಕ್ನೋ: ಇಶಾನ್‌ ಕಿಶನ್‌ (Ishan Kishan) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಗಳಿಸಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ 232 ರನ್‌ಗಳ ಕಠಿಣ ಗುರಿ ನೀಡಿದೆ.

ಲಕ್ನೋದ ಏಕನಾ ಕ್ರೀಡಾಂಗಣದಲ್ಲಿಂದು ಜಿತೇಶ್‌ ಶರ್ಮಾ (Jitesh Sharma) ನಾಯಕತ್ವದಲ್ಲಿ ಕಣಕ್ಕಿಳಿದ ಆರ್‌ಸಿಬಿ (RCB) ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಹೈದರಾಬಾದ್‌ ತಂಡಕ್ಕೆ ಬಿಟ್ಟುಕೊಟ್ಟಿತು.

ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್‌ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್‌ ಶರ್ಮಾ 17 ಎಸೆತಗಳಲ್ಲಿ 34 ರನ್‌ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್‌ ಹೆಡ್‌ ಕೂಡ 10 ಎಸೆತಗಳಲ್ಲಿ 17 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

3ನೇ ವಿಕೆಟ್‌ಗೆ ಇಶಾನ್‌ ಕಿಶನ್‌ ಮತ್ತು ಕ್ಲಾಸೆನ್‌ ಜೋಡಿ 27 ಎಸೆತಗಳಲ್ಲಿ 48 ರನ್‌, 4ನೇ ವಿಕೆಟಿಗೆ ಕಿಶನ್‌-ಅನಿಕೇತ್‌ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್‌ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್‌ ಕಮ್ಮಿನ್ಸ್‌ ಹಾಗೂ ಇಶಾನ್‌ ಕಿಶನ್‌ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್‌ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

ಹೈದರಾಬಾದ್‌ ಪರ 195.83 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಇಶಾನ್‌ ಕಿಶನ್‌ ಅಜೇಯ 94 ರನ್‌ (48 ಎಸೆತ, 5 ಸಿಕ್ಸರ್‌, 7 ಬೌಂಡರಿ) ಚಚ್ಚಿದ್ರೆ ,‌ ಅಭಿಷೇಕ್‌ ಶರ್ಮಾ 34 ರನ್‌, ಟ್ರಾವಿಸ್‌ ಹೆಡ್‌ 17 ರನ್‌, ಹೆನ್ರಿಕ್‌ ಕ್ಲಾಸೆನ್‌ 24 ರನ್‌, ಅನಿಕೇತ್‌ ವರ್ಮಾ 26 ರನ್‌, ಅಭಿನವ್‌ ಮನೋಹರ್‌ 12 ರನ್‌, ಪ್ಯಾಟ್‌ ಕಮ್ಮಿನ್ಸ್‌ ಅಜೇಯ 13 ರನ್‌ ಗಳಿಸಿದರು. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

ಇನ್ನೂ ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್‌ 2 ವಿಕೆಟ್‌ ಕಿತ್ತರೆ, ಭುವನೇಶ್ವರ್‌ ಕುಮಾರ್‌, ಲುಂಗಿ ಎನ್‌ಗಿಡಿ, ಸುಯಶ್‌ ಶರ್ಮಾ, ಕೃನಾಲ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಫ್ಯಾಂಟಸಿ ಕ್ರಿಕೆಟ್‌ನಲ್ಲಿ ಗೆದ್ದ ಅಭಿಮಾನಿಗೆ ಲ್ಯಾಂಬೊರ್ಗಿನಿ ಕಾರು ಗಿಫ್ಟ್‌ ಕೊಟ್ಟ ರೋಹಿತ್‌ ಶರ್ಮಾ