ಬ್ರಿಟನ್‍ನ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ಶ್ರೀಹರಿಕೋಟಾ: ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಭಾನುವಾರ ಬೆಳಗ್ಗೆ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ 36 ಉಪಗ್ರಹಗಳನ್ನು ಹೊತ್ತ ರಾಕೆಟ್ (Rocket) ಅನ್ನು ಉಡಾವಣೆ ಮಾಡಿದೆ.

ಒನ್ ವೆಬ್ ಇಂಡಿಯಾ -2 (OneWeb India-2) ಮಿಷನ್‍ನ ಭಾಗವಾಗಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್ ಅನ್ನು ಕಕ್ಷೆಗೆ ಹಾರಿಸಿದೆ. ಬ್ರಿಟನ್ ಮೂಲದ ಒನ್‍ವೆಬ್ ಗ್ರೂಪ್‍ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್ – 3 ಉಡಾವಣಾ ನೌಕೆ ನಭಕ್ಕೆ ಹಾರಿತು.

ಉಪಗ್ರಹ ಉಡಾವಣೆ ಬೆನ್ನಲ್ಲೇ ಒನ್‍ವೆಬ್ ಟ್ವೀಟ್ ಮಾಡಿದೆ. ಯಶಸ್ವಿ ಉಡಾವಣೆಗಾಗಿ ಇಸ್ರೋ ಹಾಗೂ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್‌ನಲ್ಲಿರುವ ಎಲ್ಲಾ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. ಇದು ಸರ್ಕಾರಕ್ಕೆ ಹಾಗೂ ಕಂಪನಿಗಳಿಗೆ ಸಂಪರ್ಕವನ್ನು ಸಕ್ರಿಯಗೊಳಿಸುತ್ತದೆ ಎಂದು ಟ್ವೀಟ್‍ನಲ್ಲಿ ತಿಳಿಸಿದೆ.

ಈ ವರ್ಷ ಇಸ್ರೋ ನಡೆಸಿದ 2ನೇ ರಾಕೆಟ್ ಉಡಾವಣೆ ಇದಾಗಿದೆ. ಈ ಉಡಾವಣೆಯೊಂದಿಗೆ ಒನ್‍ವೆಬ್ ತನ್ನ 616 ಉಪಗ್ರಹಗಳನ್ನು ಕಕ್ಷೆಯಲ್ಲಿ ಹೊಂದಿದೆ. ಈ ಮಿಷನ್ ಭಾರತದಿಂದ ಉಡಾವಣೆ ಮಾಡುತ್ತಿರುವ ಒನ್‍ವೆಬ್‍ನ ಎರಡನೇ ಉಪಗ್ರಹವಾಗಿದೆ. ಬ್ರಿಟನ್ ಮತ್ತು ಭಾರತೀಯ ಬಾಹ್ಯಾಕಾಶ ಉದ್ಯಮಗಳ ನಡುವಿನ ಸಹಯೋಗಕ್ಕೆ ಇದು ಮಾದರಿಯಾಗಿದೆ ಎಂದು ಒನ್‍ವೆಬ್ ಈ ಹಿಂದೆ ಹೇಳಿತ್ತು.

ಮೊದಲ ಬಾರಿ 2022ರ ಅಕ್ಟೋಬರ್ 23ರಂದು ಇಸ್ರೋನ 36 ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಇದನ್ನೂ ಓದಿ: ದೇಶದಲ್ಲೇ ಮೊದಲ ಉಪಚುನಾವಣೆ ನಡೆದಿದ್ದು ಚಿಕ್ಕಮಗಳೂರಿನ ತರೀಕೆರೆಯಲ್ಲಿ

Comments

Leave a Reply

Your email address will not be published. Required fields are marked *