ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

ಬೆಂಗಳೂರು: ಇಸ್ರೋ ವಿಜ್ಞಾನಿಯ (ISRO Scientist) ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರತನಹಳ್ಳಿ ಮುಖ್ಯ ರಸ್ತೆಯಲ್ಲಿ ಆಗಸ್ಟ್‌ 24ರ ರಾತ್ರಿ 12:45ರ ವೇಳೆಗೆ ಮನೆಗೆ ತೆರಳುತ್ತಿದ್ದಾಗ ಗೂಂಡಾಗಳು ವಿಜ್ಞಾನಿ ಅಶುತೋಷ್ ಸಿಂಗ್ (Ashutosh Singh) ಅವರ ಕಾರನ್ನು ಹಿಂಬಾಲಿಸಿದ್ದಾರೆ. ಗೂಂಡಾಗಳು ಕಾರನ್ನು (Car) ತಡೆದು ನಿಲ್ಲಿಸಿ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರು ಕ್ರಮ

 

ಈ ಘಟನೆಯ ಬಗ್ಗೆ ದೂರು ನೀಡಲು ಮುಂದಾದಾಗ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಎಕ್ಸ್‌ ಮೂಲಕ ಘಟನೆ ಹಂಚಿಕೊಂಡಿದ್ದಾರೆ. ಬಳಿಕ ಎಚ್ಚೆತ್ತ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]