ಹೊಸ 13 ಜಿಲ್ಲೆಗಳನ್ನು ಉದ್ಘಾಟಿಸಿದ ಜಗನ್

ಅಮರಾವತಿ: ಆಂಧ್ರಪ್ರದೇಶ ಸೋಮವಾರ ರಾಜ್ಯದ ಹೊಸ ಆಡಳಿತಾತ್ಮಕ ನಕ್ಷೆಯನ್ನು ರಚಿಸಿದೆ. 13 ಹೊಸ ಜಿಲ್ಲೆಗಳ ರಚನೆಯೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ 26 ಕ್ಕೆ ಹೆಚ್ಚಿಸಲಾಗಿದೆ.

ಆಂಧ್ರಪ್ರದೇಶದ ಮುಖ್ಯ ಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಮವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ 13 ಹೊಸ ಜಿಲ್ಲೆಗಳನ್ನು ಉದ್ಘಾಟಿಸಿದರು. ಹೊಸ ಜಿಲ್ಲೆಗಳ ರಚನೆ ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿಗೆ ಸುಲಭವಾಗಲು ನೂತನ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಜಗನ್ ಮೋಹನ್ ರೆಡ್ಡಿ 2019ರ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, 25 ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದನ್ನು ಜಿಲ್ಲೆಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. ಇದನ್ನೂ ಓದಿ: ಸಿಬಿಐ ಪಂಜರದ ಗಿಳಿಯಲ್ಲ: ಕಿರಣ್ ರಿಜಿಜು

ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್‌ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

ಹಿಂದುಳಿದ ಬುಡಕಟ್ಟು ಪ್ರದೇಶಗಳ ಮೇಲೆ ಹೆಚ್ಚಿನ ಗಮನ ಹರಿಸಿರುವ ಆಂಧ್ರ ಸರ್ಕಾರ ಹೆಚ್ಚಿನ ಜಿಲ್ಲೆಗಳಾಗಿ ವಿಭಜಿಸಿದೆ. ಸಣ್ಣ ಜಿಲ್ಲೆಗಳ ರಚನೆಯಿಂದ ಜಿಲ್ಲಾ ಕೇಂದ್ರದಿಂದ ಆಸುಪಾಸಿನ ಗ್ರಾಮಗಳಿಗೆ ದೂರ ಕಡಿಮೆಯಾಗುತ್ತದೆ. ಜಿಲ್ಲಾಡಳಿತ ಜನರಿಗೆ ಹತ್ತಿರವಾಗುತ್ತದೆ. ಸರ್ಕಾರ ಜನರಿಗೆ ಹತ್ತಿರವಾದಂತೆ ಹೊಣೆಗಾರಿಕೆ ಹೆಚ್ಚಾಗುತ್ತದೆ ಎಂದು ರೆಡ್ಡಿ ತಿಳಿಸಿದರು.

Comments

Leave a Reply

Your email address will not be published. Required fields are marked *