ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಕನ್ನಡದ ಜೇಮ್ಸ್ ಚಿತ್ರಕ್ಕೆ ತೊಂದರೆ ಆಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಮತ್ತು ಪುನೀತ್ ಅವರ ಅಭಿಮಾನಿಗಳು ಹೋರಾಟ ಮಾಡುತ್ತಿರುವಾಗಲೇ ನಟ ಶಿವರಾಜ್ ಕುಮಾರ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ತೊಂದರೆ ಆಗಿಲ್ಲ ಎಂದು ಅಚ್ಚರಿಕೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ್ ಕುಮಾರ್, ‘ನಾನು ರಾಜಕಾರಣಿಯಾಗಿ ಈ ಮಾತನ್ನು ಹೇಳುತ್ತಿಲ್ಲ. ನಿಜ ಹೇಳುತ್ತಿರುವೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಿಲ್ಲ. ಕನ್ನಡ ಸಿನಿಮಾಗಳ ವಿಚಾರದಲ್ಲಿ ನಾನು ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಚಿತ್ರಗಳಿಗೆ ತೊಂದರೆಯಾದಾಗ ಧ್ವನಿ ಎತ್ತಿದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿರುವ ಜೇಮ್ಸ್ ಥಿಯೇಟರ್ ನಿಂದ ತಗೆಯುವುದು ಸರಿಯಾದದ್ದು’ ಅಲ್ಲ ಅಂದಿದ್ದಾರೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

ಈ ವಾರ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ರಿಲೀಸ್ ಆಗುತ್ತಿದೆ. 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಸಹಜವಾಗಿಯೇ ಜೇಮ್ಸ್ ಚಿತ್ರಕ್ಕೆ ಥಿಯೇಟರ್ ಕೊರತೆ ಎದುರಾಗಲಿದೆ. ಹೀಗಾಗಿ ಜೇಮ್ಸ್ ಸಿನಿಮಾ ಉಳಿಸಿಕೊಳ್ಳಲು ನಿರ್ಮಾಪಕರು ನಾನಾ ರೀತಿಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಚಿತ್ರತಂಡ, ಜೇಮ್ಸ್ ಸಿನಿಮಾಗೆ ತೊಂದರೆ ಆಗದಂತೆ ಸಹಾಯ ಮಾಡಿ ಎಂದು ಕೇಳಿಕೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಚಿತ್ರತಂಡದ ಜತೆ ನಿಲ್ಲುವುದಾಗಿ ಹೇಳಿದ್ದಾರಂತೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

ನಟ ಶಿವರಾಜ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಅವರ ರೇಸ್‍ವೀವ್ ನಿವಾಸದಲ್ಲಿ ಭೇಟಿ ಮಾಡಿದ ಶಿವರಾಜ್ ಕುಮಾರ್, ‘ಜೇಮ್ಸ್’ ಸಿನಿಮಾದ ಕುರಿತಾಗಿ ಎದ್ದಿರುವ ಗೊಂದಲದ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಸಹೋದರ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾವನ್ನು ವೀಕ್ಷಿಸಲು ಆಹ್ವಾನ ಕೂಡ ನೀಡಿದ್ದಾರೆ.

Comments

Leave a Reply

Your email address will not be published. Required fields are marked *