ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್‌ ಸಿಬ್ಬಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲಾ ನ್ಯಾಯಾಲಯದಲ್ಲಿ (Court) ಸಾಕ್ಷಿಗಾಗಿ ತಂದಿದ್ದ ಗ್ರೆನೇಡ್ ಸ್ಫೋಟಗೊಂಡು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದುಅಧಿಕಾರಿಗಳು ತಿಳಿಸಿದ್ದಾರೆ.

ಬಾರಾಮುಲ್ಲಾ ಪಟ್ಟಣದ ನ್ಯಾಯಾಲಯದ ಸಾಕ್ಷ್ಯ ಕೊಠಡಿ ಒಳಗೆ ಪ್ರಕರಣ ಒಂದರ ಸಾಕ್ಷ್ಯವಾಗಿ ಗ್ರೆನೇಡ್ ಸಂಗ್ರಹಿಸಿಲಾಗಿತ್ತು. ಅದು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 1:5ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೋಲೀಸ್‌ ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋರ್ಟ್‌ ಬಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ವದಂತಿಗಳಿಗೂ ಕಿವಿಗೊಡದಂತೆ ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.