ಪುಲ್ವಾಮಾ: ಜಮ್ಮು ಕಾಶ್ಮೀರದ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿದೆಯಾ ಎನ್ನುವ ಚರ್ಚೆಯೊಂದು ಇದೀಗ ಎದ್ದಿದೆ.
ಪುಲ್ವಾಮಾದಲ್ಲಿ ನಡೆದ ದಾಳಿ ಕಳೆದ 20 ವರ್ಷಗಳಲ್ಲಿಯೇ ನಡೆದ ಅತೀ ದೊಡ್ಡ ದಾಳಿಯಾಗಿದೆ. 2001ರಲ್ಲಿ ಶ್ರೀನಗರದಲ್ಲಿರುವ ಸಚಿವಾಲಯದ ಮುಂಭಾಗ ನಡೆಸಿದ ಬಾಂಬ್ ದಾಳಿಯಲ್ಲಿ 38 ಮಂದಿ ಮೃತಪಟ್ಟು, 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗುರುವಾರ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿತ್ತು ಅನ್ನೋ ಚರ್ಚೆ ನಡೀತಿದೆ. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

ಭಾರತಕ್ಕಿತ್ತಾ ದಾಳಿಯ ಸುಳಿವು..?
ಫೆ. 5ರಂದು ಪಾಕಿಸ್ತಾನದ ಕರಾಚಿಯಲ್ಲಿ ಜೈಶ್ ಎ ಮೊಹ್ಮದ್ ಸಂಘಟನೆಯ ಜಾಥಾ ನಡೆದಿತ್ತು. ಇದರಲ್ಲಿ ಉಗ್ರ ಮಸೂದ್ ಅಜರ್ ಸಹೋದರ ಅಬ್ದುಲ್ ರವೂಫ್ ಅಜರ್ ಕೂಡಾ ಭಾಗಿಯಾಗಿದ್ದನು. ಈ ವೇಳೆ ಭಾರತದಲ್ಲಿ ದಾಳಿ ನಡೆಸಲು 7 ಉಗ್ರರ ತಂಡಗಳನ್ನು ಕಳುಹಿಸೋದಾಗಿ ಘೋಷಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು
ರವೂಫ್ ಘೋಷಣೆಯ ಬೆನ್ನಲ್ಲೇ ಅಲರ್ಟ್ ಆಗಿದ್ದ ಭಾರತದ ಗುಪ್ತಚರ ಇಲಾಖೆ ಭಾರತದಲ್ಲಿ ಜೈಷ್ ಎ ಮೊಹಮ್ಮದ್, ಲಷ್ಕರ್ ಎ ತಯ್ಬಾ ದಾಳಿ ಬಗ್ಗೆ ಸುಳಿವು ನೀಡಿತ್ತು. ವಾಹನಗಳ ಮೂಲಕವೇ ದಾಳಿ ನಡೆಸೋದಾಗಿ ಉಗ್ರ ಸಂಘಟನೆಯ ದೂರವಾಣಿ ಕರೆಗಳ ಮೂಲಕ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು

ಇತ್ತೀಚಿನ ದಿನಗಳಲ್ಲಿ 2 ಸಂಘಟನೆಗಳು ಒಟ್ಟಾಗಿ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಆತ್ಮಾಹುತಿ ದಾಳಿಯ ಪ್ಲಾನ್ ಮಾಡಿ 44 ಮಂದಿ ಭಾರತದ ಅಮಾಯಕ ಯೋಧರನ್ನು ಬಲಿತೆಗೆದುಕೊಂಡಿದೆ.
https://www.youtube.com/watch?v=5JqTWRx0JWA
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply